ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಂ ಇಂಡಿಯಾದ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಅವರನ್ನು 2024 ರ ಐಸಿಸಿಯ ವರ್ಷದ ಕ್ರಿಕೆಟಿಗನಾಗಿ ಆಯ್ಕೆ ಮಾಡಲಾಗಿದೆ.
ಈ ಪ್ರಶಸ್ತಿ ರೇಸ್ನಲ್ಲಿ ಬುಮ್ರಾ ಮಾತ್ರವಲ್ಲದೆ ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್, ಇಂಗ್ಲೆಂಡ್ನ ಜೋ ರೂಟ್ ಮತ್ತು ಹ್ಯಾರಿ ಬ್ರೂಕ್ ಕೂಡ ಇದ್ದರು. ಆದರೆ ಬುಮ್ರಾ ಅವರೆಲ್ಲರನ್ನೂ ಹಿಂದಿಕ್ಕಿ ಸರ್ ಗಾರ್ಫೀಲ್ಡ್ ಸೋಬರ್ಸ್ ಪ್ರಶಸ್ತಿಯನ್ನು ತನ್ನದಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಈ ಮೂಲಕ ಬುಮ್ರಾ ಈ ಪ್ರತಿಷ್ಠಿತ ಪ್ರಶಸ್ತಿ ಗೆದ್ದ ಭಾರತದ ಐದನೇ ಆಟಗಾರನೆಂಬ ದಾಖಲೆ ಕೂಡ ನಿರ್ಮಿಸಿದ್ದಾರೆ.
ಬುಮ್ರಾ ಅವರಿಗೂ ಮುನ್ನ ರಾಹುಲ್ ದ್ರಾವಿಡ್ (2004), ಸಚಿನ್ ತೆಂಡೂಲ್ಕರ್ (2010), ರವಿಚಂದ್ರನ್ ಅಶ್ವಿನ್ (2016) ಮತ್ತು ವಿರಾಟ್ ಕೊಹ್ಲಿ (2017, 2018) ಕೂಡ ಈ ಪ್ರಶಸ್ತಿಯನ್ನು ಗೆದ್ದಿದ್ದಾರೆ.
ಕಳೆದ ವರ್ಷ ಇಂಗ್ಲೆಂಡ್ ವಿರುದ್ಧದ ತವರಿನಲ್ಲಿ ನಡೆದ ಟೆಸ್ಟ್ ಸರಣಿ ಮತ್ತು ಟಿ20 ವಿಶ್ವಕಪ್ನಲ್ಲಿ ಭಾರತದ ಪ್ರಶಸ್ತಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬುಮ್ರಾ ಅವರನ್ನು ನಿನ್ನೆಯಷ್ಟೇ ವರ್ಷದ ಅತ್ಯುತ್ತಮ ಟೆಸ್ಟ್ ಆಟಗಾರನಾಗಿ ಆಯ್ಕೆ ಮಾಡಲಾಗಿತ್ತು. ಇದೀಗ ಬುಮ್ರಾರನ್ನು ಐಸಿಸಿ ವರ್ಷದ ಪುರುಷ ಆಟಗಾರನಾಗಿಯೂ ಆಯ್ಕೆ ಮಾಡಲಾಗಿದೆ.