ಹೊಸದಿಗಂತ ಡಿಜಿಟಲ್ ಡೆಸ್ಕ್:
ಗಂಗಾ ನದಿಯಲ್ಲಿ ಸ್ನಾನ ಮಾಡುವುದರಿಂದ ಬಡತನ ಹೋಗುವುದಿಲ್ಲ, ಹೊಟ್ಟೆ ತುಂಬಲ್ಲ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ತಿರುಗೇಟು ನೀಡಿದ್ದಾರೆ.
ಮುಂದೊಂದು ದಿನ ಮಲ್ಲಿಕಾರ್ಜುನ ಖರ್ಗೆ ಕೂಡ ಗಂಗಾ ಸ್ನಾನ ಮಾಡಲೇಬೇಕಾಗುತ್ತದೆ ಎಂದು ಭವಿಷ್ಯ ನುಡಿದ್ದಿದ್ದಾರೆ .
ಖರ್ಗೆ ಅವರು ಈಗ ಏನೇನೋ ಹೇಳ್ತಿದ್ದಾರೆ. ಆದ್ರೆ ಯಾವುದೇ ಒಬ್ಬ ವ್ಯಕ್ತಿಗೆ ವಯಸ್ಸು ಜಾಸ್ತಿ ಆಗುತ್ತಿದ್ದಂತೆ ಸತ್ಯಕ್ಕೆ ಹತ್ತಿರವಾಗುತ್ತಾನೆ. ಆದ್ರೆ ಖರ್ಗೆ ಅವರು ರಾಜಕೀಯ ಸ್ವಾರ್ಥಕ್ಕಾಗಿ ಸತ್ಯವನ್ನು ಮುಚ್ಚಿಡುತ್ತಿದ್ದಾರೆ. ಅಂತಹವರೊಂದಿಗೆ ಪ್ರಯಾಗ್‌ರಾಜ್‌ನ ಸತ್ಯಗಳನ್ನು ಚರ್ಚಿಸಿದ್ರೆ ಅದು ನಾನು ನನಗೆ ಅನ್ಯಾಯ ಮಾಡಿಕೊಂಡಂತೆ ಆಗುತ್ತದೆ ಎಂದಿದ್ದಾರೆ.
ಸ್ವಾತಂತ್ರ್ಯ ಹೋರಾಟ ಸಂದರ್ಭದಲ್ಲಿ ರಝಾಕರು ತಮ್ಮ ಕುಟುಂಬವನ್ನು ಹೇಗೆ ನಡೆಸಿಕೊಂಡರು ಎಂಬ ಸತ್ಯವನ್ನು ಖರ್ಗೆ ಬಹಿರಂಗಪಡಿಸಬೇಕು. ಸತ್ಯ ಒಪ್ಪಿಕೊಳ್ಳುವ ದಿನ ಹತ್ತಿರವಾಗುತ್ತಿದೆ ಎಂದು ಸಹ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.