ಖಾಸಗಿ ಬಸ್ ಪಲ್ಟಿಯಾಗಿ ಭೀಕರ ಅಪಘಾತ: ಓರ್ವ ಮೃತ್ಯು, ಐವರಿಗೆ ಗಂಭೀರ ಗಾಯ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಖಾಸಗಿ ಬಸ್ ಪಲ್ಟಿಯಾಗಿ ಬಾಲಕ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ ಜಿಲ್ಲೆಯ ಯಲಬರ್ಗಾ ತಾಲೂಕಿನ ಸಮೀಪ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದ್ದು, ಘಟನೆಯಲ್ಲಿ ಬಾಲಕ ವೈಭವ್ (9) ಮೃತಪಟ್ಟಿದ್ದಾನೆ. ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!