ಹೊಸದಿಗಂತ ಡಿಜಿಟಲ್ ಡೆಸ್ಕ್:
ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಬಾಬಾ ಸಿದ್ದಿಕಿ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್ ಅನ್ಮೋಲ್ ಬಿಷ್ಣೋಯ್ ಮತ್ತು ಇತರ ಇಬ್ಬರು ಆರೋಪಿಗಳ ವಿರುದ್ಧ ಮುಂಬೈನ ವಿಶೇಷ ನ್ಯಾಯಾಲಯವು ಜಾಮೀನು ರಹಿತ ವಾರಂಟ್ ಜಾರಿ ಮಾಡಿದೆ.
ಮಹಾರಾಷ್ಟ್ರದ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ ಅಡಿಯಲ್ಲಿ ದಾಖಲಾದ ಪ್ರಕರಣಗಳ ವಿಶೇಷ ನ್ಯಾಯಾಧೀಶರಾದ ಬಿ.ಡಿ.ಶೆಲ್ಕೆ ಅವರು ತಮ್ಮ ಆದೇಶದಲ್ಲಿ, ಆರೋಪಿ ಬಿಷ್ಣೋಯ್ ಪರಾರಿಯಾಗಿದ್ದಾನೆಂದು ಹೇಳಿದ್ದು, ಹೀಗಾಗಿ ಜಾಮೀನು ರಹಿತ ವಾರಂಟ್ ಹೊರಡಿಸುವುದು ಅಗತ್ಯ ಎಂದು ಹೇಳಿದ್ದಾರೆ.