ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಹಾ ಕುಂಭಮೇಳದಲ್ಲಿ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ , ನಟಿ, ನಿರೂಪಕಿ ಅನುಶ್ರೀ, ಚಾರ್ಲಿ ಸಿನಿಮಾ ನಿರ್ದೇಶಕ ಕಿರಣ್ ರಾಜ್ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ರಾಜ್ ಬಿ ಶೆಟ್ಟಿ ಕೊರಳಿನಲ್ಲಿ ರುದ್ರಾಕ್ಷಿ ಮಾಲೆ ಧರಿಸಿ ಹಣೆಯಲ್ಲಿ ಶ್ರೀರಾಮ್ ಎಂದು ಬರೆದುಕೊಂಡಿದ್ದಾರೆ. ನಾವು ಬೆಂಗಳೂರಿನ ಸ್ನೇಹಿತರ ಜೊತೆ ಕುಂಭಮೇಳಕ್ಕೆ ಆಗಮಿಸಿದ್ದೇವೆ. ನಿನ್ನೆ ನಾವು ಪವಿತ್ರ ಸ್ನಾನ ಮಾಡಿದೆವು ಎಂದು ತಿಳಿಸಿದರು.