ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬ್ರೇಕ್: ಸುಗ್ರೀವಾಜ್ಞೆ ತರಲು ಸಿದ್ದರಾಮಯ್ಯ ಸಂಪುಟ ಒಪ್ಪಿಗೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮೈಕ್ರೋ ಫೈನಾನ್ಸ್ ಕಿರುಕುಳ ಮಿತಿ ಮೀರಿದ್ದು, ಈ ಹಿನ್ನೆಲೆ ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಸಂಪುಟ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಸಿಎಂ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದ ಬಗ್ಗೆ ಮಹತ್ವದ ಚರ್ಚೆ ನಡೆದಿದೆ. ಹೊಸ ಕಾನೂನು ತರುವ ಡ್ರಾಫ್ಟ್‌ ಬಗ್ಗೆ ಗಂಭೀರ ಮಾತುಕತೆ ನಡೆದಿದ್ದು, ಸುಗ್ರೀವಾಜ್ಞೆ ತರದೆ ಅಧಿವೇಶನದಲ್ಲಿ ಮಂಡಿಸಲು ಸರ್ಕಾರ ನಿರ್ಧಾರ ಮಾಡಿದೆ

ಸಚಿವ ಸಂಪುಟ ಸಭೆ ಬಳಿಕ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಹೆಚ್ಚಿನ ಮಾಹಿತಿ ನೀಡಿದರು. ರೈತರು, ಕಾರ್ಮಿಕರು ಚಿಕ್ಕ ಅತಿ ಚಿಕ್ಕ ವ್ಯಾಪಾರಿಗಳು, ಬೀದಿ ಬದಿ ವ್ಯಾಪಾರಿಗಳು ಸಾಲ ತೆಗೆದುಕೊಂಡಿದ್ದಾರೆ. ಆ ಸಾಲ ವಸೂಲಿ ಪ್ರಕ್ರಿಯೆ ನಡೆಯುತ್ತಿರೋದನ್ನ ಒಪ್ಪದಂತೆ ಆಗುತ್ತಾ ಇದೆ.ಮೈಕ್ರೋ ಫೈನಾನ್ಸ್ ಸಾಲಗಳಿಂದ ಜನರು ಬಹಳ ತೊಂದರೆಗೆ ಬಂದಿದ್ದಾರೆ. ಅಮಾನವೀಯವಾಗಿ ಸಾಲ, ಬಡ್ಡಿ ವಸೂಲಿ ಮಾಡ್ತಾ ಇದ್ದಾರೆ. ಸರ್ಕಾರ ಅದಕ್ಕಾಗಿ ಹೊಸ ಮಸೂದೆ ತರ್ತಾ ಇದೆ. ನಾವು ಚರ್ಚೆ ಮಾಡಿದ್ದೇವೆ. ತಾಂತ್ರಿಕ ಕಾರಣದಿಂದ ಇವತ್ತು ಸಂಜೆ 4 ಗಂಟೆಗೆ ಸಿಎಂ ಹಿರಿಯ ಸಚಿವರ ಸಭೆ ಕರೆದಿದ್ದಾರೆ. ಹೊಸ ಬಿಲ್‌ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲು ಸಿಎಂಗೆ ಅಧಿಕಾರ ನೀಡಿದ್ದೇವೆ ಎಂದು ಕಾನೂನು ಸಚಿವ ಹೆಚ್‌.ಕೆ ಪಾಟೀಲ್ ತಿಳಿಸಿದ್ದಾರೆ.

ಈಗ ಸುಗ್ರೀವಾಜ್ಞೆಗೆ ರಾಜ್ಯಪಾಲರ ಬಳಿ ಅಂಕಿತ ಪಡೆಯಲು ನಿರ್ಧರಿಸಿದೆ. ಇನ್ನು ಮೈಕ್ರೋಫೈನಾನ್ಸ್ ವಿಚಾರದ ಸುಗ್ರೀವಾಜ್ಞೆಗೆ ಸಂಬಂಧಿಸಿ ಮತ್ತೊಂದು ಹಂತದ ಸಭೆ ನಡೆಯಲಿದೆ. ಕ್ಯಾಬಿನೆಟ್ ಸಿಎಂಗೆ ನಿರ್ಣಯ ಕೈಗೊಳ್ಳುವ ಪರಮಾಧಿಕಾರ ನೀಡಿದ್ದು, ಕೆಲವು ಅಂಶಗಳನ್ನು ಮಸೂದೆಯಲ್ಲಿ ಸೇರ್ಪಡೆ ಮಾಡಲು ತೀರ್ಮಾನಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!