ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಸಂಸತ್ತಿನ ಬಜೆಟ್ ಅಧಿವೇಶನದ ಮೊದಲ ದಿನವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಉಭಯ ಸದನಗಳನ್ನುದ್ದೇಶಿಸಿ ಮಾತು ಆರಂಭಿಸಿದ್ದಾರೆ.
ಸರ್ಕಾರದ ಪ್ರಯತ್ನದಿಂದ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ದ್ರೌಪದಿ ಮುರ್ಮು ಹೇಳಿದ್ದಾರೆ. ಸಬ್ಕಾ ಸಾಥ್, ಸಬ್ಕಾ ವಿಕಾಸ್, ಸಬ್ಕಾ ವಿಶ್ವಾಸ್, ಸಬ್ಕಾ ಪ್ರಯಾಸ್ ಎಂಬುದು ನನ್ನ ಸರ್ಕಾರದ ಮಂತ್ರವಾಗಿದೆ ಎಂದು ಹೇಳಿದರು.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಉಭಯ ಸದನಗಳ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿ, ಈ ವರ್ಷದ ಬಜೆಟ್ ಅಧಿವೇಶನದ ಆರಂಭವನ್ನು ಗುರುತಿಸಿದರು.
ಬಜೆಟ್ ಅಧಿವೇಶನಕ್ಕೆ 16 ಮಸೂದೆಗಳ ಪಟ್ಟಿಯನ್ನು ಸರ್ಕಾರ ಸಿದ್ಧಪಡಿಸಿದೆ. ಇಂದು 12ಗಂಟೆ ವೇಳೆಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ.