ಬೆಂಗಳೂರು ಆಗಲಿದೆ ಇನ್ನಷ್ಟು ಗ್ರೇಟ್, ಕೀರ್ತಿ ತಲುಪಲಿದೆ ಮತ್ತಷ್ಟು ಹೈಟ್: ಡಿಕೆಶಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರಿನಲ್ಲಿ 6 ಉಪನಗರಗಳನ್ನು ಅಭಿವೃದ್ಧಿಪಡಿಸಲು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಈ ಬಗ್ಗೆ ಡಿಸಿಎಂ ಡಿಕೆ ಶಿವಕುಮಾ‌ರ್ ಟ್ವೀಟ್ ಮಾಡಿದ್ದು, ಬೆಂಗಳೂರು ಆಗಲಿದೆ ಇನ್ನಷ್ಟು ಗ್ರೇಟ್, ಕೀರ್ತಿ ತಲುಪಲಿದೆ ಮತ್ತಷ್ಟು ಹೈಟ್ ಎಂದು ಹೇಳಿದ್ದಾರೆ.

ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ರಾಮನಗರ ಜಿಲ್ಲೆ ರಾಮನಗರ ತಾಲೂಕು, ಬಿಡದಿ ಹೋಬಳಿಯ ಬೈರಮಂಗಲ ಬನ್ನಿಗೆರೆ, ಹೊಸೂರು, ಕೆ.ಜಿ. ಗೊಲ್ಲರಪಾಳ್ಯ, ಕಂಚುಗಾರನಹಳ್ಳಿ, ಅರಳಾಳುಸಂದ್ರ, ಕೆಂಪಯ್ಯನಪಾಳ್ಯ, ಕಂಚುಗಾರನಹಳ್ಳಿ ಕಾವಲು, ಮಂಡಲಹಳ್ಳಿ ಹಾಗೂ ಹಾರೋಹಳ್ಳಿ ಹೋಬಳಿಯ ವಡೇರಹಳ್ಳಿ ಗ್ರಾಮ ಸೇರಿ ಒಟ್ಟು 10 ಗ್ರಾಮಗಳ ವ್ಯಾಪ್ತಿಯ ಪ್ರದೇಶದಲ್ಲಿ ‘ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ’ ಯೋಜನೆಯನ್ನು ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!