‘ಸಚಿನ್ ತೆಂಡೂಲ್ಕರ್’ಗೆ ‘BCCI’ನಿಂದ ಜೀವಮಾನ ಸಾಧನೆ ಪ್ರಶಸ್ತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರಿಗೆ 2024ನೇ ಸಾಲಿನ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ (BCCI) ನೀಡುವ ಕರ್ನಲ್ ಸಿ.ಕೆ. ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ ಲಭಿಸಿದೆ.

eಭಾರತದ ಪರ 664 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿರುವ ಸಚಿನ್ ಅವರ ಹೆಸರಿನಲ್ಲಿ ಟೆಸ್ಟ್, ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್‌ಗಳಿಸಿದ ದಾಖಲೆ ಇದೆ. ಕ್ರಿಕೆಟ್ ಕ್ಷೇತ್ರದಲ್ಲಿ ಸಚಿನ್‌ ಅವರ ಸಾಧನೆಯನ್ನು ಪರಿಗಣಿಸಿ ಬಿಸಿಸಿಐ ಕರ್ನಲ್ ಸಿ.ಕೆ ನಾಯ್ಡು ಜೀವಮಾನ ಸಾಧನೆ ಪ್ರಶಸ್ತಿ ನೀಡುತ್ತಿದೆ ಎಂದು ಮಂಡಳಿ ತಿಳಿಸಿದೆ.

ಸಚಿನ್ 200 ಟೆಸ್ಟ್ ಪಂದ್ಯಗಳು, 463 ಏಕದಿನ ಪಂದ್ಯಗಳಲ್ಲಿ ಆಡುವ ಮೂಲಕ ಅತಿ ಹೆಚ್ಚು ಪಂದ್ಯವನ್ನಾಡಿದ ಕ್ರಿಕೆಟಿಗ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಟೆಸ್ಟ್‌ನಲ್ಲಿ 15,921 ರನ್‌ಗಳು ಹಾಗೂ ಏಕದಿನದಲ್ಲಿ 18,426 ರನ್‌ಗಳನ್ನು ದಾಖಲಿಸಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!