ಚಾಂಪಿಯನ್ಸ್ ಟ್ರೋಫಿ: 15 ಸದಸ್ಯರ ಪಾಕಿಸ್ತಾನ ತಂಡ ಪ್ರಕಟ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಚಾಂಪಿಯನ್ಸ್ ಟ್ರೋಫಿಗೆ ಆತಿಥೇಯ ಪಾಕಿಸ್ತಾನ ತಂಡವನ್ನು ಪ್ರಕಟಿಸಿದೆ. ಪಿಸಿಬಿಯ ಆಯ್ಕೆ ಸಮಿತಿಯು ಮೊಹಮ್ಮದ್ ರಿಜ್ವಾನ್ ನಾಯಕತ್ವದಲ್ಲಿ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಆಯ್ಕೆಯಾಗಿರುವವರಲ್ಲಿ ಕೆಲವು ಆಟಗಾರರು ಬಹಳ ಸಮಯದ ನಂತರ ತಂಡಕ್ಕೆ ಮರಳಿದ್ದಾರೆ.

15 ಸದಸ್ಯರ ಪಾಕ್ ತಂಡ ಪ್ರಕಟ
ಚಾಂಪಿಯನ್ಸ್ ಟ್ರೋಫಿಗೆ ಆತಿಥ್ಯ ವಹಿಸುತ್ತಿರುವ ಪಾಕಿಸ್ತಾನವನ್ನು ಹೊರತುಪಡಿಸಿ ಉಳಿದ 7 ತಂಡಗಳು ಈಗಾಗಲೇ ತಮ್ಮ ತಂಡವನ್ನು ಪ್ರಕಟಿಸಿದ್ದವು. ಆದರೆ ಪಾಕಿಸ್ತಾನ ಮಾತ್ರ ತನ್ನ ತಂಡವನ್ನು ಪ್ರಕಟಿಸಿರಲಿಲ್ಲ. ಮೊದಲ 6 ತಂಡಗಳು ಐಸಿಸಿ ನಿಗದಿಪಡಿಸಿದ ದಿನಾಂಕದೊಳಗೆ ತಮ್ಮ ತಮ್ಮ ತಂಡಗಳನ್ನು ಪ್ರಕಟಿಸಿದ್ದವು. ಇದೀಗ 2017ರಲ್ಲಿ ಪ್ರಶಸ್ತಿ ಗೆದ್ದ ಆಟಗಾರರ ವಿಶೇಷ ವಿಡಿಯೋ ಮೂಲಕ ಪಾಕಿಸ್ತಾನ ಕ್ರಿಕೆಟ್ ಮಂಡಳಿ ತನ್ನ ತಂಡವನ್ನು ಪ್ರಕಟಿಸಿದೆ.

ಪಾಕಿಸ್ತಾನ ತಂಡ: ಬಾಬರ್ ಆಝಂ, ಫಖರ್ ಜಮಾನ್, ಕಮ್ರಾನ್ ಗುಲಾಮ್, ಸೌದ್ ಶಕೀಲ್, ತಯ್ಯಬ್ ತಾಹಿರ್, ಫಹೀಮ್ ಅಶ್ರಫ್, ಖುಶ್ದಿಲ್ ಶಾ, ಸಲ್ಮಾನ್ ಅಲಿ ಅಘಾ (ಉಪನಾಯಕ), ಮೊಹಮ್ಮದ್ ರಿಜ್ವಾನ್ (ನಾಯಕ), ಉಸ್ಮಾನ್ ಖಾನ್, ಅಬ್ರಾರ್ ಅಹ್ಮದ್, ಹ್ಯಾರಿಸ್ ರೌಫ್, ಮೊಹಮ್ಮದ್ ಹಸ್ನೈನ್, ನಸೀಮ್ ಶಾ, ಶಾಹೀನ್ ಶಾ ಅಫ್ರಿದಿ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!