ಹೊಸದಿಗಂತ ಡಿಜಿಟಲ್ ಡೆಸ್ಕ್:
ಸತತ 8ನೇ ಬಜೆಟ್ ಮಂಡಿಸುವ ಮೂಲಕ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ದಾಖಲೆ ಬರೆಯಲು ಸಜ್ಜಾಗಿದ್ದಾರೆ.
ಇಂದು ಸೀತಾರಾಮನ್ ಅವರು 8ನೇ ಬಜೆಟ್ ಮಂಡಿಸಲಿದ್ದಾರೆ. ಇದು ಭಾರತದ ಸಂಸದೀಯ ಇತಿಹಾಸದಲ್ಲಿ ಹೊಸ ದಾಖಲೆಯಾಗಲಿದೆ.
ಮಾಜಿ ಪ್ರಧಾನಿ ಮೊರಾರ್ಜಿ ದೇಸಾಯಿ ಅತಿ ಹೆಚ್ಚು ಬಜೆಟ್ ಮಂಡಿಸಿದ ದಾಖಲೆಯನ್ನು ಹೊಂದಿದ್ದಾರೆ. ಅವರು ಪ್ರಧಾನಿ ಜವಾಹರಲಾಲ್ ನೆಹರೂ ಮತ್ತು ನಂತರ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಹಣಕಾಸು ಸಚಿವರಾಗಿದ್ದರು. ಈ ಅವಧಿಯಲ್ಲಿ ಒಟ್ಟು 10 ಬಜೆಟ್ ಮಂಡಿಸಿದ್ದಾರೆ.