ಬಜೆಟ್ ಬೆನ್ನಲ್ಲೇ ಸ್ಮಾರ್ಟ್​ಫೋನ್​, ಎಲೆಕ್ಟ್ರಿಕ್ ವಸ್ತುಗಳ ಬೆಲೆಯಲ್ಲಿ ಭಾರೀ ಇಳಿಕೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಮಂಡಿಸಲಿದ್ದಾರೆ. ಹಣದುಬ್ಬರದಿಂದ ಬಳಲುತ್ತಿರುವ ಜನರಿಗೆ ಬಜೆಟ್‌ನಿಂದ ಪರಿಹಾರ ಸಿಗುವ ನಿರೀಕ್ಷೆ ಇದೆ. ಟೆಕ್ ಕ್ಷೇತ್ರ ಕೂಡ ಭಾರೀ ದೊಡ್ಡ ನಿರೀಕ್ಷೆಯಲ್ಲಿದೆ.

ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ಉತ್ಪನ್ನಗಳ ಬೆಲೆಗಳು ಕಡಿಮೆ ಆಗಬಹುದು ಎನ್ನಲಾಗುತ್ತಿದೆ. ಟೆಕ್​ ಕ್ಷೇತ್ರ ಆಮದು ಸುಂಕ ಕಡಿಮೆ ಮಾಡುವಂತೆ ಆಗ್ರಹ ಮಾಡಿದೆ. ಹೀಗಾಗಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸುವ ಜನರಿಗೆ ಸರ್ಕಾರ ಸ್ವಲ್ಪ ರಿಲೀಫ್ ನೀಡಬಹುದು.

ಮೊಬೈಲ್ ಫೋನ್ ಕಂಪನಿಗಳು ಆಮದು ಸುಂಕ ಕಡಿಮೆ ಮಾಡಲು ಸರ್ಕಾರವನ್ನು ಒತ್ತಾಯಿಸಿದ್ದವು. ಆಮದು ಸುಂಕ ಕಮ್ಮಿ ಇದ್ದರೆ ಜನರಿಗೆ ಕಡಿಮೆ ಬೆಲೆಗೆ ಫೋನ್​ಗಳು ಸಿಗುತ್ತವೆ.  ಸ್ಮಾರ್ಟ್​ಫೋನ್​ಗಳು ಮಾತ್ರವಲ್ಲದೇ, ಇಯರ್ ಫೋನ್, ಮೌಸ್​, ಕಂಪ್ಯೂಟರ್, ಕೀಬೋರ್ಡ್, ಲ್ಯಾಪ್​ಟಾಪ್, ಐಪ್ಯಾಡ್​ ಸೇರಿದಂತೆ ಅನೇಕ ವಸ್ತುಗಳ ಬೆಲೆ ಕಡಿಮೆಯಾಗುವ ನಿರೀಕ್ಷೆ ಇದೆ. ​

ಮೊಬೈಲ್ ಹೊರತುಪಡಿಸಿ ಇತರ ಎಲೆಕ್ಟ್ರಾನಿಕ್ ವಸ್ತುಗಳು ಕೂಡ ಬಜೆಟ್ ನಂತರ ಕಡಿಮೆ ಆಗಬಹುದು. ಫೋನ್ ಕಂಪನಿಗಳಂತೆ ಇಂಡಿಯನ್ ಸೆಲ್ಯುಲರ್ ಮತ್ತು ಎಲೆಕ್ಟ್ರಾನಿಕ್ಸ್ ಅಸೋಸಿಯೇಷನ್ ​​ಕೂಡ ಸರ್ಕಾರಕ್ಕೆ ಬೇಡಿಕೆ ಇಟ್ಟಿದೆ. ಎಲೆಕ್ಟ್ರಾನಿಕ್ ವಸ್ತುಗಳ ಘಟಕಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಬೇಕೆಂದು ಒತ್ತಾಯ ಮಾಡಿವೆ. ಒಂದು ವೇಳೆ ಸರ್ಕಾರ ಅಂತಹ ನಿರ್ಧಾರಗಳನ್ನು ತೆಗೆದುಕೊಂಡರೆ ಸ್ಮಾರ್ಟ್ ಟಿವಿ ಸೇರಿದಂತೆ ಅನೇಕ ವಸ್ತುಗಳ ಬೆಲೆ ಕಡಿಮೆ ಆಗಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here