ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ 8ನೇ ಬಜೆಟ್ ಮಂಡಿಸಲು ಸಿದ್ಧರಾಗಿದ್ದಾರೆ. ಸಂಸತ್ ಇತಿಹಾಸದಲ್ಲಿ ಹೆಚ್ಚು ಬಜೆಟ್ ಮಂಡಿಸಿದ ಮಹಿಳಾ ಹಣಕಾಸು ಮಂತ್ರಿ ಎಂಬ ಹೆಗ್ಗಳಿಕೆಗೆ ಇವರು ಪಾತ್ರರಾಗಲಿದ್ದಾರೆ.
ಇಂದು ಬೆಳಗ್ಗೆ 11 ಗಂಟೆಗೆ ಸಂಸತ್ತಿನಲ್ಲಿ 2025ರ ಕೇಂದ್ರ ಬಜೆಟ್ ಅನ್ನು ನಿರ್ಮಲಾ ಸೀತಾರಾಮನ್ ಮಂಡಿಸಲಿದ್ದಾರೆ. ಸಂಸತ್ತಿನ ಅಧಿಕೃತ ಚಾನೆಲ್‌ಗಳಲ್ಲಿ ಭಾಷಣವನ್ನು ಪ್ರಸಾರ ಮಾಡಲಾಗುತ್ತದೆ.
ಬಜೆಟ್ ಅಧಿವೇಶನಕ್ಕೂ ಮುನ್ನ ಸಚಿವೆ ನಿರ್ಮಲಾ ಸೀತಾರಾಮನ್ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದ್ದು, ಬಜೆಟ್‌ಗೆ ಅನುಮೋದನೆ ಪಡೆಯಲಿದ್ದಾರೆ.