ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರಸಕ್ತ ಸಾಲಿನ ಸಂಪೂರ್ಣ ಬಜೆಟ್ ಮಂಡನೆ ಆರಂಭವಾಗಿದ್ದು, ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡುತ್ತಿದ್ದಾರೆ.
ಈ ಬಾರಿ ಬಜೆಟ್ನಲ್ಲಿ ಸಣ್ಣ-ಮಧ್ಯಮ ಕೈಗಾರಿಕಾ ವಲಯಕ್ಕೆ ಉತ್ತೇಜನ ಸಿಕ್ಕಿದ್ದು, ಬೀದಿಬದಿ ವ್ಯಾಪಾರಿಗಳಿಗೆ UPI ಲಿಂಕ್ ಕ್ರೆಡಿಟ್ ಕಾರ್ಡ್ ನೀಡಲಾಗುತ್ತದೆ.
ಭಾರತದಲ್ಲಿ ಸುಮಾರು 7.5 ಕೋಟಿ ಮಂದಿಗೆ ಮಧ್ಯಮ ವರ್ಗದ ಕೈಗಾರಿಗಳು ಉದ್ಯೋಗ ನೀಡಿವೆ. ಇವರಿಗೆ ನೆರವಾಗಲು ಸಣ್ಣ ಹಾಗೂ ಅತೀ ಸೂಕ್ಷ್ಮಿ ಉದ್ಯಮಗಳಿಗೆ ಸಾಲ ನೀಡಲು ಅವಕಾಶ ನೀಡಲಾಗುತ್ತದೆ. 5 ಕೋಟಿ ರೂ.ನಿಂದ 10 ಕೋಟಿ ರೂ.ವರೆಗೆ ಉದ್ಯಮ ಆರಂಭಿಸಲು ಸಾಲ ನೀಡಲಾಗುತ್ತದೆ.
ಅಲ್ಲದೇ ಅವಧಿ ಸಾಲ ಸುಮಾರು 20 ಕೋಟಿ ರೂ. ನೀಡಲು ಅವಕಾಶ ಕಲ್ಪಿಸಲಾಗುತ್ತದೆ. ಅಲ್ಲದೇ ಮೊದಲ ಬಾರಿಗೆ ಉದ್ಯಮ ಆರಂಭಿಸುವ ಪರಿಶಿಷ್ಟ ಜಾತಿ ಹಾಗೂ ಪಂಗಡದ ಮಹಿಳೆಯರಿಗೆ 2 ಕೋಟಿ ರೂ. ಸಾಲ ನೀಡುವುದಾಗಿ ನಿರ್ಮಲಾ ಸೀತರಾಮನ್ ಘೋಷಿಸಿದರು.