Monday, January 26, 2026
Monday, January 26, 2026
spot_img

ಮದುವೆ ಆಮಿಷವೊಡ್ಡಿ 10 ವರುಷಗಳ ಕಾಲ ಲೈಂಗಿಕ ಶೋಷಣೆ: ನಟ ನದೀಮ್ ಖಾನ್ ಅರೆಸ್ಟ್

ಹೊಸದಿಗಂತ ಡಿಜಿಟಲ್ ಡೆಸ್ಕ್:

‘ಧುರಂಧರ್’ ಸಿನಿಮಾದಲ್ಲಿ ಅಖ್ಲಾಕ್ ಎಂಬ ಪೋಷಕ ಪಾತ್ರದಲ್ಲಿ ಮಿಂಚಿದ್ದ ನಟ ನದೀಮ್ ಖಾನ್ ಈಗ ಗಂಭೀರ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಳೆದ 10 ವರ್ಷಗಳಿಂದ ತನ್ನ ಮನೆಯ ಕೆಲಸದಾಕೆಗೆ ಮದುವೆಯ ಭರವಸೆ ನೀಡಿ ಲೈಂಗಿಕವಾಗಿ ಬಳಸಿಕೊಂಡ ಆರೋಪದ ಮೇಲೆ ಪೊಲೀಸರು ಇವರನ್ನು ಬಂಧಿಸಿದ್ದಾರೆ.

ಸಂತ್ರಸ್ತ ಮಹಿಳೆ (41) ಮತ್ತು ನದೀಮ್ ಖಾನ್ ಅವರ ಭೇಟಿ 2015ರಲ್ಲಿ ನಡೆದಿತ್ತು. ಆಗ 31 ವರ್ಷದವರಾಗಿದ್ದ ಮಹಿಳೆ, ನದೀಮ್ ಅವರ ಮನೆಯಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು.

ಈ ಸಮಯದಲ್ಲಿ ಇಬ್ಬರ ನಡುವೆ ಸ್ನೇಹ ಬೆಳೆದು ಅದು ದೈಹಿಕ ಸಂಬಂಧಕ್ಕೆ ತಿರುಗಿತ್ತು. ನದೀಮ್ ಅವರು ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ, ಸತತ 10 ವರ್ಷಗಳ ಕಾಲ ಅವರನ್ನು ಲೈಂಗಿಕವಾಗಿ ಬಳಸಿಕೊಂಡಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಮಹಿಳೆ ಮದುವೆಯ ವಿಷಯ ಪ್ರಸ್ತಾಪಿಸಿದಾಗ ನದೀಮ್ ನಿರಾಕರಿಸಿದ್ದಾರೆ. ಇದರಿಂದ ತಾನು ವಂಚನೆಗೆ ಒಳಗಾಗಿದ್ದೇನೆ ಎಂದು ಅರಿತ ಮಹಿಳೆ ಪೊಲೀಸರ ಮೊರೆ ಹೋಗಿದ್ದಾರೆ.

ದೂರನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಈಗಾಗಲೇ ನದೀಮ್ ಖಾನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪುರಾವೆಗಳನ್ನು ಸಂಗ್ರಹಿಸಲಾಗುತ್ತಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

Must Read