ಹೆಚ್​ಡಿ ಕುಮಾರಸ್ವಾಮಿ ವಿರುದ್ಧ ಭೂ ಕಬಳಿಕೆ ಆರೋಪ: ರಾಜ್ಯ ಸರಕಾರದಿಂದ ಎಸ್​ಐಟಿ ರಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬ‌ ಸದಸ್ಯರ ವಿರುದ್ಧ ಕೇಳಿಬಂದಿರುವ ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಕೇತಗಾನಹಳ್ಳಿ ಗ್ರಾಮದ ಸರ್ಕಾರಿ ಜಮೀನು ಕಬಳಿಸಿದ್ದಾರೆ ಎಂಬ ಆರೋಪದ ತನಿಖೆ ನಡೆಸಲು ರಾಜ್ಯ ಸರ್ಕಾರ ಹಿರಿಯ ಐಎಎಸ್ ಅಧಿಕಾರಿ ಅಮಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ಎಸ್​ಐಟಿ ರಚನೆ ಮಾಡಿದೆ.

ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಮತ್ತು ಕರ್ನಾಟಕ ಭೂ ಕಬಳಿಕೆ ನಿಷೇಧ ಕಾಯ್ದೆ-2011ರ ಅಡಿಯಲ್ಲಿ ಎಸ್​ಐಟಿ ರಚನೆ ಮಾಡಲಾಗಿದೆ.

ಈ ಎಸ್​ಐಟಿ ತಂಡದಲ್ಲಿ ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಜಂಟಿ ನಿರ್ದೇಶಕ ನಿಸ್ಸಾರ್ ಅಹಮ್ಮದ್​, ಬೆಂಗಳೂರು ವಿಭಾಗದ ಹೆಚ್ಚುವರಿ ಪ್ರಾದೇಶಿಕ ಇಸ್ಲಾವುದ್ದೀ ಗದ್ಯಾಳ, ಕಂದಾಯ ಆಯುಕ್ತಾಲಯದ ತಹಶೀಲ್ದಾರ್​ ಗಣಪತಿ ಶಾಸ್ತ್ರಿ ಇದ್ದಾರೆ.

ಹೆಚ್​ಡಿ ಕುಮಾರಸ್ವಾಮಿ ಮತ್ತು ಅವರ ಕುಟುಂಬದವರು ಕೇತಗಾನಹಳ್ಳಿಯಲ್ಲಿ ಸರ್ವೆ ನಂ. 8,9,10, 16, 17 ಮತ್ತು 79ರಲ್ಲಿನ ಜಮೀನುಗಳನ್ನು ಕಬಳಿಸಿದ್ದಾರೆ ಎಂಬ ಆರೋಪಿಸಿ ಧಾರವಾಡದ ಸಮಾಜ ಪರಿವರ್ತನಾ ಸಮುದಾಯದ ಸಂಸ್ಥಾಪಕ ಎಸ್​ಆರ್​ ಹಿರೇಮಠ ಹೈಕೋರ್ಟ್​ನಲವಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶ ಪಾಲಿಸಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿಯನ್ನೂ ಸಲ್ಲಿಸಿದ್ದರು.

ಈ ಅರ್ಜಿ ವಿಚಾರಣೆ ವೇಳೆ ಹೈಕೋರ್ಟ್​ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಇದರ ಬೆನ್ನಲ್ಲೇ ಸರ್ಕಾರ ಎಸ್​ಐಟಿ ರಚನೆ ಮಾಡಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!