ಆಫ್ರಿಕಾ ವಿರುದ್ಧ ಅಂಡರ್ 19 ಮಹಿಳಾ ಟಿ20 ವಿಶ್ವಕಪ್ ಗೆದ್ದ ಭಾರತ ವನಿತಾ ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಲೇಷ್ಯಾ ರಾಜಧಾನಿ ಕೌಲಾಲಂಪುರದ ಬ್ಯೂಮಾಸ್ ಓವಲ್ ಸ್ಟೇಡಿಯಂನಲ್ಲಿ ನಡೆದ ಅಂಡರ್ 19 ಮಹಿಳಾ ಟಿ20 ವಿಶ್ವಕಪ್​ ಫೈನಲ್ ಪಂದ್ಯದಲ್ಲಿ ಭಾರತ ಮತ್ತು ಆಫ್ರಿಕಾವನ್ನು ಮಣಿಸಿ ಸತತ ಎರಡನೇ ಬಾರಿಗೆ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.

ಈ ಹಿಂದೆ 2023ರಲ್ಲಿ ನಡೆದಿದ್ದ ಚೊಚ್ಚಲ ಆವೃತ್ತಿಯಲ್ಲೂ ಟೀಂ ಇಂಡಿಯಾ, ಇಂಗ್ಲೆಂಡ್‌ ತಂಡವನ್ನು ಮಣಿಸಿ ಚಾಂಪಿಯನ್ ಆಗಿತ್ತು.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ದಕ್ಷಿಣ ಆಫ್ರಿಕಾ ತಂಡ 82 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಭಾರತ ವನಿತಾ ಪಡೆ 11.2 ಓವರ್​ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು ಜಯದ ನಗೆಬೀರಿತು.

ಈ ಟೂರ್ನಿಯಲ್ಲಿ ಕನ್ನಡತಿ ನಿಕ್ಕಿ ಪ್ರಸಾದ್ ನಾಯಕತ್ವದಲ್ಲಿ ಕಣಕ್ಕಿಳಿದಿದ್ದ ಟೀಂ ಇಂಡಿಯಾದ ಪ್ರದರ್ಶನ ಸ್ಮರಣೀಯವಾಗಿತ್ತು. ಅದಕ್ಕೆ ಪೂರಕವಾಗಿ ಭಾರತ ತಂಡ ಇಡೀ ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದೆ ಪ್ರಶಸ್ತಿ ಗೆದ್ದುಕೊಂಡಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!