Monday, January 26, 2026
Monday, January 26, 2026
spot_img

ಮೃತ್ಯು ರೂಪದಲ್ಲಿ ಬಂದ ಪ್ರವಾಸಿ ವಾಹನ: ಸಹಕಾರ ಸಂಘದ ಸಿಬ್ಬಂದಿ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಲ್ದೂರು ಇಲ್ಲಿನ ಕೃಷಿ ಪತ್ತಿನ ಸಹಕಾರ ಸಂಘದ ನೌಕರರೊಬ್ಬರು ರಸ್ತೆ ಅಪಘಾತದಲ್ಲಿ ದುರ್ಮರಣ ಹೊಂದಿದ ಘಟನೆ ನಡೆದಿದೆ. ಮೃತರನ್ನು ನವಮಿ (26 ವರ್ಷ) ಎಂದು ಗುರುತಿಸಲಾಗಿದೆ.

ಕೆಲಸ ಮುಗಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಬಂದ ಪ್ರವಾಸಿ ವಾಹನವೊಂದು ನವಮಿ ಅವರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತ ಎಸಗಿದ ವಾಹನವು ತುಮಕೂರು ಜಿಲ್ಲೆಯ ತಿಪಟೂರು ಮೂಲದ್ದು ಎಂದು ತಿಳಿದುಬಂದಿದ್ದು, ಅಪಘಾತದ ಬಳಿಕ ಚಾಲಕನು ವಾಹನ ನಿಲ್ಲಿಸದೆ ಪರಾರಿಯಾಗಿದ್ದಾನೆ.

ಯುವತಿಯ ಅಕಾಲಿಕ ಮರಣದಿಂದ ಆಲ್ದೂರು ಹೋಬಳಿಯಲ್ಲಿ ಶೋಕ ಮಡುಗಟ್ಟಿದೆ. ಈ ಹಿನ್ನೆಲೆಯಲ್ಲಿ ಈ ಹಿಂದೆ ನಿಗದಿಯಾಗಿದ್ದ ಹಿಂದೂ ಸಮಾಜೋತ್ಸವ ಕಾರ್ಯಕ್ರಮವನ್ನು ಸದ್ಯಕ್ಕೆ ಮುಂದೂಡಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಸದ್ಯ ಆಲ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಚಾಲಕನಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

Must Read