ಹೊಸದಿಗಂತ ಡಿಜಿಟಲ್ ಡೆಸ್ಕ್:
ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಸಹೋದರ ರಾಣಾ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ.
ಇದೇ ಫೆ.7 ಮತ್ತು 8ರಂದು ಬೆಂಗಳೂರಿನ ‘ಮುಕ್ತ ಚಾಮರ ವಜ್ರ’ ಪ್ಯಾಲೇಸ್ ಗ್ರೌಂಡ್ನಲ್ಲಿ ರಾಣಾ ಮದುವೆ ಜರುಗಲಿದೆ. ರಾಣಾ ಮದುವೆ ಆಗುತ್ತಿರುವ ಹುಡುಗಿಯ ಹೆಸರು ಕೂಡ ರಕ್ಷಿತಾ. ರಾಣಾ ಹಾಗೂ ರಕ್ಷಿತಾ ಅವರದ್ದು ಲವ್ ಕಮ್ ಅರೇಂಜ್ ಮ್ಯಾರೇಜ್.
ಇಬ್ಬರ ಪ್ರೀತಿಗೆ ಕುಟುಂಬಸ್ಥರ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇದೀಗ 7 ವರ್ಷಗಳ ಬಂಧಕ್ಕೆ ಮದುವೆಯ ಮುದ್ರೆ ಒತ್ತಲು ಈ ಜೋಡಿ ಸಜ್ಜಾಗಿದ್ದಾರೆ.