ಹೊಸದಿಗಂತ ಡಿಜಿಟಲ್ ಡೆಸ್ಕ್:
ಫೆಬ್ರವರಿ 5 ರಂದು ನಡೆಯಲಿರುವ ಚುನಾವಣೆ ಕುರಿತು ವರದಿ ಮಾಡಲು ರಾಷ್ಟ್ರ ರಾಜಧಾನಿಗೆ ಬಂದಿದ್ದ ಕೆಲವು ಪತ್ರಕರ್ತರಿಗೆ ಪೊಲೀಸರು ಹಲ್ಲೆ ನಡೆಸಿರುವ ಘಟನೆ ಕುರಿತು ದೆಹಲಿ ಪೊಲೀಸರು ಹಾಗೂ ಚುನಾವಣಾ ಆಯೋಗದ ವಿರುದ್ಧ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.
ಇದಕ್ಕೂ ಮುನ್ನಾ ದೆಹಲಿ ವಿಧಾನಸಭಾ ಚುನಾವಣೆ ವರದಿಗಾಗಿ ಬಂದಿದ್ದ ಕೆಲ ಚಂಢೀಗಡದ ಪತ್ರಕರ್ತರ ವಿರುದ್ಧ ದೆಹಲಿ ಪೊಲೀಸರ ಕ್ರಮವನ್ನು ಪ್ರೇಸ್ ಕ್ಲಬ್ ಆಫ್ ಇಂಡಿಯಾ ಖಂಡಿಸಿತು. ದೆಹಲಿಯಲ್ಲಿ ವರದಿ ಮಾಡುವಾಗ ತಮ್ಮೊಂದಿಗೆ ಪೊಲೀಸರು ಅನುಚಿತವಾಗಿ ವರ್ತಿಸಿದ್ದಾರೆ. ಪತ್ರಕರ್ತರಿಗೆ ಕಿರುಕುಳ, ಬೆದರಿಕೆ ಹಾಕಲಾಗಿದೆ ಎಂದು ದೂರು ನೀಡಲಾಗಿದೆ.
ಇದಕ್ಕೆ ಸಂಬಂಧಿದಂತೆ ದೆಹಲಿ ಚುನಾವಣಾ ಆಯೋಗ ಮತ್ತು ಭಾರತೀಯ ಚುನಾವಣಾ ಆಯೋಗ ಮಧ್ಯ ಪ್ರವೇಶಿ, ಚುನಾವಣಾ ಕುರಿತು ಸುಗಮವಾಗಿ ಸುದ್ದಿ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಪ್ರೆಸ್ ಕ್ಲಬ್ ಆಫ್ ಇಂಡಿಯಾ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿದೆ.