ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರು ನಗರದ ಜ್ಞಾನಭಾರತಿ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಹೆಬ್ಲಗುಪ್ಪೆ ಗ್ರಾಮದ ನಿವಾಸಿ ಎಂದು ತಿಳಿದಿದೆ.
ಇಂದು ಬೆಳಿಗ್ಗೆ 10 ಗಂಟೆ ಸುಮಾರಿಗೆ ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದಾಳೆ. ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿ ಪಾವನ ಮೃತ ವಿದ್ಯಾರ್ಥಿನಿ ಕನ್ನಡ ಅಧ್ಯಯನ ಕೇಂದ್ರದಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಳು. ಸೋಮವಾರ ಮದ್ಯಾಹ್ನ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆಗೆ ಕಾರಣ ತಿಳಿದುಬಂದಿಲ್ಲ.