ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರು ಮತ್ತೆ ಅಟ್ಟಹಾಸ ಮೆರೆದಿದ್ದು, ಉಗ್ರ ದಾಳಿಯಲ್ಲಿ ಮಾಜಿ ಸೈನಿಕ ಸಾವನ್ನಪ್ಪಿದ್ದು, ಅವರ ಪತ್ನಿ ಮತ್ತು ಮಗಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಇಂದು ಭಯೋತ್ಪಾದಕರು ಕುಲ್ಗಾಮ್‌ನ ಬೆಹಿಬಾಗ್‌ನ ನಿವಾಸಿ ಮಾಜಿ ಸೈನಿಕ ಮಂಜೂರ್ ಅಹ್ಮದ್ ವೇಜ್ ಅವರ ಮೇಲೆ ದಾಳಿ ಮಾಡಿದ್ದು, ಅವರ ಹೊಟ್ಟೆಗೆ ಗುಂಡು ತಗುಲಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು ಅವರ ಪತ್ನಿ ಮತ್ತು ಮಗಳ ಕಾಲಿಗೆ ಗುಂಡು ತಗುಲಿದೆ. ಗಾಯಗೊಂಡವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಐಜಿಪಿ ತಿಳಿಸಿದ್ದಾರೆ.
ಸದ್ಯ, ಭದ್ರತಾ ಪಡೆಗಳು ಘಟನಾ ಪ್ರದೇಶವನ್ನು ಸುತ್ತುವರೆದಿವೆ ಮತ್ತು ದಾಳಿಕೋರರನ್ನು ಹಿಡಿಯಲು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ ಎಂದು ತಿಳಿದು ಬಂದಿದೆ.
ಮೃತ ಮಾಜಿ ಸೈನಿಕ ಸುಮಾರು ಐದು ವರ್ಷಗಳ ಹಿಂದೆ ಟೆರಿಟೋರಿಯಲ್ ಆರ್ಮಿಯಿಂದ ನಿವೃತ್ತರಾಗಿದ್ದರು. ಸದ್ಯ ಅವರು ಈ ಪ್ರದೇಶದಲ್ಲಿ ತಮ್ಮ ವೈಯಕ್ತಿಕ ಕೆಲಸವನ್ನು ನಿರ್ವಹಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿದು ಬಂದಿದೆ.
ಕುಲ್ಗಾಮ್ ಜಿಲ್ಲೆಯ ಬೆಹಿಬಾಗ್ ಪ್ರದೇಶದಲ್ಲಿ ಮಾಜಿ ಸೈನಿಕ ಮಂಜೂರ್ ಅಹ್ಮದ್ ವೇಜ್ ಅವರ ವಯಸ್ಸು 45 ಆಗಿದ್ದು, ಅವರ ಪತ್ನಿ ಅಲಿಯಾಗೆ 38 ವರ್ಷವಾಗಿತ್ತು. ಮಗಳು ಅಪ್ರಾಪ್ತ ವಯಸ್ಸಿನವಳಾಗಿದ್ದಳು ಎಂದು ತಿಳಿದು ಬಂದಿದೆ.