February 3, 2026
Tuesday, February 3, 2026
spot_img

ತುಮಕೂರು ಬಳಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಸ್ಥಳದಲ್ಲೇ ಮೂವರು ಸಾವು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ತುಮಕೂರು ತಾಲೂಕಿನ ನೆಲಹಾಳ್ ಸಮೀಪ ಇಂದು ಸೋಮವಾರ ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತರೆಲ್ಲರೂ ಬೆಂಗಳೂರು ಮೂಲದ ನಿವಾಸಿಗಳಾಗಿದ್ದಾರೆ.

ಅಪಘಾತದಲ್ಲಿ ಮಾರುತಿ ಎರ್ಟಿಗಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಓರ್ವ ವ್ಯಕ್ತಿಗೆ ಗಂಭೀರ ಗಾಯವಾಗಿದ್ದು, ಇನ್ನಿಬ್ಬರು ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !