ಹೊಸದಿಗಂತ ಡಿಜಿಟಲ್ ಡೆಸ್ಕ್:
ನಮ್ಮ ಒಳಜಗಳದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ವಿಜಯೇಂದ್ರರನ್ನ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದರೆ ಬಿಜೆಪಿಗೆ 10 ಸೀಟೂ ಬರಲ್ಲ ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ಹೇಳಿದ್ದಾರೆ.
ಪಕ್ಷದಲ್ಲಿನ ಬೆಳವಣಿಗೆ ನೋಡಿ ಜನ ಉಗೀತಿದ್ದಾರೆ, ಕಾರ್ಯಕರ್ತರಿಗೆ ನೋವಾಗಿದೆ. ನಾವು ಸೈಲೆಂಟ್ ಇದ್ವಿ, ಯಡಿಯೂರಪ್ಪ, ವಿಜಯೇಂದ್ರ ಮಾತಾಡಬೇಡಿ ಅಂದಿದ್ರು. ಆದ್ರೆ ನಮಗೆ ನೋವಾಗಿದೆ. ಹೀಗಾಗಿ ಇಂದು ತುರ್ತು ಸಭೆ ನಡೆಸಬೇಕಾಯಿತು ಅಂತ ಹೇಳಿದ್ದಾರೆ.