One Minute Apology ಪುಸ್ತಕ ಓದಿ: ರೂಪಾ, ರೋಹಿಣಿ ಸಿಂಧೂರಿಗೆ ಕೋರ್ಟ್ ಸಲಹೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ವಿರುದ್ಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ದಾಖಲಿಸಿದ್ದ ಮಾನನಷ್ಟ ಪ್ರಕರಣ ಸಂಬಂಧ ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್ ನಲ್ಲಿಂದು ಸಾಕ್ಷ್ಯ ವಿಚಾರಣೆ ನಡೆದಿದೆ .

ಈ ವೇಳೆ ಕೋರ್ಟ್ ಗೆ ಹಾಜರಾಗಿದ್ದ ರೋಹಿಣಿ ಸಿಂಧೂರಿ ಹಾಗೂ ರೂಪಾ‌ ಮೌದ್ಗಿಲ್ ನಡುವೆ ರಾಜಿ ಮಾಡಲು ಮುಂದಾಗಿದೆ. ಇಬ್ಬರೂ ಉತ್ತಮ ಹೆಸರು ಗಳಿಸಿದ ಹಿರಿಯ ಅಧಿಕಾರಿಗಳಾಗಿದ್ದೀರಿ. ನಿಮ್ಮ ಸಮಯ ಸಮಾಜಕ್ಕಾಗಿ ಮೀಸಲಿಡಬೇಕು. ಕೋರ್ಟ್ ಕಲಾಪದಲ್ಲಿ ಸಮಯ ವ್ಯಯಿಸುವ ಬದಲು ರಾಜಿ ಸಾಧ್ಯವೇ ಯೋಚಿಸಿ ಎಂದು ನ್ಯಾಯಾಧೀಶ ವಿಜಯ್ ಕುಮಾರ್ ಜಾಟ್ಲಾ ಅವರು ಕಿವಿ ಮಾತು ಹೇಳಿದರು.

ಅಲ್ಲದೇ ಇಬ್ಬರು ಅಧಿಕಾರಿಗಳಿಗೆ One Minute Apology ಪುಸ್ತಕ ಓದುವಂತೆ ಸಲಹೆ ನೀಡಿ ಮುಂದಿನ ವಿಚಾರಣೆಯನ್ನು ಫೆಬ್ರವರಿ 12ಕ್ಕೆ ಮುಂದೂಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here