ನಾನು ತುಂಬಾ ಅದೃಷ್ಟವಂತೆ: ಮಹಾಕುಂಭ ಮೇಳದಲ್ಲಿ ಪುಣ್ಯಸ್ನಾನ ಮಾಡಿದ ಬ್ಯಾಡ್ಮಿಂಟನ್ ತಾರೆ ಸೈನಾ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಹಾ ಕುಂಭದಲ್ಲಿ ದೇಶ-ವಿದೇಶಗಳಿಂದ ಭಕ್ತರು ಸಂಗಮದಲ್ಲಿ ಸ್ನಾನ ಮಾಡಲು ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ಭಾರತದ ಸ್ಟಾರ್ ಶಟಲ್ರ್ ಮತ್ತು ಮಾಜಿ ಒಲಿಂಪಿಕ್ ಕಂಚಿನ ಪದಕ ವಿಜೇತೆ ಸೈನಾ ನೆಹ್ವಾಲ್ ಕೂಡ ಬುಧವಾರ ಆಗಮಿಸಿ ಪವಿತ್ರ ಸ್ನಾನ ಮಾಡಿದರು.

ಈ ಪವಿತ್ರ ಕಾರ್ಯಕ್ರಮದ ಭಾಗವಾಗಿರುವುದು ವಿಶೇಷ ಅನುಭವ. ಈ ಭವ್ಯ ಕಾರ್ಯಕ್ರಮ ಆಯೋಜಿಸಿದ್ದಕ್ಕಾಗಿ ಉತ್ತರ ಪ್ರದೇಶ ಸರ್ಕಾರಕ್ಕೆ ಅಭಿನಂದನೆಗಳು. ಹೆಚ್ಚು ಹೆಚ್ಚು ಜನರು ಇಲ್ಲಿಗೆ ಬಂದು ಇದನ್ನು ವಿಶ್ವಪ್ರಸಿದ್ಧಿಗೊಳಿಸುತ್ತಾರೆ ಎಂಬ ಭರವಸೆ ಇದೆ ಎಂದರು.

ಇಂದು ಸಂಜೆ ತಂದೆಯವರೊಂದಿಗೆ ತ್ರಿವೇಣಿ ಸಂಗಮಕ್ಕೆ ಹೋಗುತ್ತಿದ್ದೇನೆ ಮತ್ತು ಮುಂದೆ ತಾಯಿಯವರೊಂದಿಗೆ ಕೂಡ ಇಲ್ಲಿಗೆ ಬರುವ ಆಸೆ ಇದೆ ಎಂದು ಹೇಳಿದರು.

ಇದು ತುಂಬಾ ದೊಡ್ಡ ಉತ್ಸವ. ಇಲ್ಲಿಗೆ ಬರಲು ಅವಕಾಶ ಸಿಕ್ಕಿದ್ದಕ್ಕೆ ನಾನು ತುಂಬಾ ಅದೃಷ್ಟವಂತೆ.ಎಲ್ಲರೂ ಒಗ್ಗಟ್ಟಾಗಿ ನಾವು ಎಷ್ಟು ಬಲಿಷ್ಠರು ಎಂದು ತೋರಿಸಿದ್ದಕ್ಕೆ ನನಗೆ ಸಂತೋಷವಾಗಿದೆ. ಈ ಉತ್ಸವ ನಮ್ಮ ದೇಶದಲ್ಲಿ ನಡೆಯುತ್ತಿರುವುದು ಹೆಮ್ಮೆಯ ವಿಷಯ ಎಂದರು.

ಯುವಜನರಿಗೆ ಸಂದೇಶ. ಸೈನಾ ನೆಹ್ವಾಲ್ ದೇಶದ ಯುವಜನರ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದರು ಮತ್ತು ಆಧ್ಯಾತ್ಮಿಕ ಕಾರ್ಯಕ್ರಮಗಳು ನಮಗೆ ಶಕ್ತಿ ಮತ್ತು ಸಕಾರಾತ್ಮಕತೆಯನ್ನು ತುಂಬುತ್ತವೆ ಎಂದು ಹೇಳಿದರು. ದೇಶದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತಾ, ನಮ್ಮ ದೇಶ ಇನ್ನಷ್ಟು ಪ್ರಗತಿ ಹೊಂದಲಿ ಮತ್ತು ಉನ್ನತಿಯ ಹೊಸ ಎತ್ತರವನ್ನು ತಲುಪಲಿ ಎಂದು ಹೇಳಿದರು.

ಇಂದು ಪ್ರಧಾನಿ ನರೇಂದ್ರ ಮೋದಿ ಮಹಾಕುಂಭ ಮೇಳದಲ್ಲಿ ಪಾಲ್ಗೊಂಡು ಪುಣ್ಯಸ್ನಾನ ಮಾಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!