ಕರೀಘಟ್ಟ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚಿದ ಕಿಡಿಗೇಡಿಗಳು

ಹೊಸ ದಿಗಂತ ವರದಿ, ಶ್ರೀರಂಗಪಟ್ಟಣ :

ತಾಲೂಕಿನ ಕರೀಘಟ್ಟ ದೇವರ ಕಾಡು ಅರಣ್ಯ ಪ್ರದೇಶಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಸುಮಾರು 25 ಎಕರೆ ಪ್ರದೇಶದ ಅರಣ್ಯ ಭಸ್ಮವಾಗಿದೆ.

ತಾಲ್ಲೂಕಿನ ಗಣಂಗೂರು ಐಬಿ ಎದುರುಗಿನ ಅರಣ್ಯ ಪ್ರದೇಶಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಅರಣ್ಯ ಪ್ರದೇಶದಲ್ಲಿನ ನೀಲಗಿರಿ, ಹೊಂಗೆ, ನೇರಳೆ, ರಕ್ತ ಚಂದನ ಸೇರಿದಂತೆ ಇತರೆ ಮರ, ಗಿಡಗಳು ಸೇರಿದಂತೆ ಹಾವು, ಮೊಲ, ನವಿಲು ಸೇರಿದಂತೆ ಇತರೆ ಪ್ರಾಣಿ ಪಕ್ಷಿಗಳು ಹಾನಿಗೊಳಗಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬೆಂಗಳೂರು-ಮೈಸೂರು ಹೆದ್ದಾರಿಗೆ ಹೊಂದಿಕೊಂಡತ್ತಿದ್ದ ಬೆಟ್ಟಕ್ಕೆ ಬೆಂಕಿ ಬಿದ್ದ ಪರಿಣಾಮ ದಟ್ಟವಾದ ಹೊಗೆ ಹಾವರಿಸಿದ್ದರಿಂದ ಹೆದ್ದಾರಿಯಲ್ಲಿ ತೆರಳುವ ಪ್ರಯಾಣಿಕರು ತೊಂದರೆ ಪಡುವಂತಾಯಿತು. ಹೊಗೆಯಿಂದಾಗಿ ಸುಮಾರು ಐದಾರು ಕಿ.ಮೀ ವರೆಗೆ ಮೂಗು ಮುಚ್ಚಿಕೊಂಡು ತೆರವಳುವ ಪರಿಸ್ಥಿತಿ ನಿರ್ಮಾಣವಾಗಿತ್ತು.

ಆರ್‌ಎಫ್‌ಒ ವಿನೋದ್ ಗೌಡ ಈ ಸಂಬಂಧ ಪ್ರತಿಕ್ರಿಯಿಸಿ, ಗುರುವಾರ ಬೆಳಗ್ಗೆ ಕಿಡಿಗೇಡಿಗಳು ಬೆಟ್ಟಕ್ಕೆ ಬೆಂಕಿ ಹಚ್ಚಿದ್ದು, ವಿಷಯ ತಿಳಿದು ಅಗ್ನಿಶಾಮಕ ದಳ ಸಿಬ್ಬಂದಿಯೊಂದಿಗೆ ತೆರಳಿ ಬೆಂಕಿ ನಂದಿಸಿ ನಂತರ ಹಿಂದಿರಿಗಿದ್ದೆವು. ಆದರೆ ಮತ್ತೆ ಮಧ್ಯಾಹ್ನ ಸಹ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಈ ಅವಘಡ ಹೆಚ್ಚಾಗಿದೆ. ನಮ್ಮ ಇಲಾಖೆ ಸಿಬ್ಬಂದಿ ಜೊತೆಗೂಡಿ ಅಗ್ನಿಶಾಮಕ ದಳದ ಸಿಬ್ಬಂಧಿಗಳೊಂದಿಗೆ ಬೆಂಕಿ ನಂದಿಸುವ ಕಾರ್ಯ ನಡೆಸಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!