ನಾಳೆ ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ ಭವಿಷ್ಯ ನಿರ್ಧಾರ!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆ ಪೂರ್ಣಗೊಳಿಸಿರುವ ಕೋರ್ಟ್, ನಾಳೆ(ಫೆಬ್ರವರಿ 07) ಆದೇಶ ಪ್ರಕಟಿಸಲಿದೆ.

ಸಿದ್ದರಾಮಯ್ಯ ವಿರುದ್ಧದ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿದ್ದು, ನಾಳೆ (ಫೆಬ್ರವರಿ 07) ಬೆಳಗ್ಗೆ 10.30ಕ್ಕೆ ಧಾರವಾಡ ಹೈಕೋರ್ಟ್ ಪೀಠದಲ್ಲಿ ತೀರ್ಪು ಪ್ರಕಟವಾಗಲಿದೆ.

ನಾಳೆ ಬಿಎಸ್​ವೈ ವಿರುದ್ಧದ ಪೋಕ್ಸೋ ಕೇಸ್ ತೀರ್ಪು
ಇತ್ತ ಧಾರವಾಡ ಹೈಕೋರ್ಟ್​ ಪೀಠದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಕರಣದ ತೀರ್ಪು ಪ್ರಕಟವಾಗುತ್ತಿದ್ದರೆ, ಇತ್ತ ಬೆಂಗಳೂರಿನಲ್ಲಿ ನಾಳೆ (ಫೆಬ್ರವರಿ 07) ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣ ತೀರ್ಪು ಹೊರಬೀಳಲಿದೆ. ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರ ಪೀಠ ತೀರ್ಪು ನೀಡಲಿದೆ.

ಸಿದ್ದರಾಮಯ್ಯ ಹಾಗೂ ಯಡಿಯೂರಪ್ಪ ಇಬ್ಬರು ಕರ್ನಾಟಕದ ಹಿರಿಯ ರಾಜಕಾರಣಿಗಳು. ಹೀಗಾಗಿ ನಾಳೆಯ ಕೋರ್ಟ್ ತೀರ್ಪು ಇವರ ಭವಿಷ್ಯ ನಿರ್ಧರಿಸಲಿದೆ. ಇನ್ನು ಈ ಇಬ್ಬರು ನಾಯಕರ ಅಭಿಮಾನಿಗಳ ಚಿತ್ತ ಕೋರ್ಟ್​ನತ್ತ ನೆಟ್ಟಿದ್ದು, ತೀರ್ಪು ಏನು ಬರುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!