ಹೊಸದಿಗಂತ ಡಿಜಿಟಲ್ ಡೆಸ್ಕ್:
ನಟ ಶಿವರಾಜಕುಮಾರ್ ಅವರ ಯಶಸ್ವಿ ಶಸ್ತ್ರ ಚಿಕಿತ್ಸೆಯ ಬಳಿಕ ಅಮೆರಿಕದಿಂದ ಬೆಂಗಳೂರಿಗೆ ಹಿಂದಿರುಗಿದ್ದು, ಸದ್ಯ ವಿಶ್ರಾಂತಿಯಲ್ಲಿರುವ ಅವರನ್ನು ನೋಡಲು ಅವರ ನಿವಾಸಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ನೀಡಿದ್ದಾರೆ.
ಅನೇಕರು ನಟನ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದ ಬೆನ್ನಲ್ಲೇ ಡಿಸಿಎಂ ಡಿ.ಕೆ. ಶಿವಕುಮಾರ್ ಕೂಡ ಶಿವಣ್ಣ ಮನೆಗೆ ತೆರಳಿ ಯೋಗಕ್ಷೇಮ ವಿಚಾರಿಸಿದ್ದಾರೆ. ಶಿವಣ್ಣ ದಂಪತಿ ಜೊತೆ ಕಾಲ ಕಳೆದಿದ್ದಾರೆ.