ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿಯಿಂದ ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ದೆಹಲಿಗೆ ತೆರಳಿದ್ದಾರೆ.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ವಾಲ್ಮೀಕಿ ಜಾತ್ರೆ ನಡೆಯುತ್ತಿದ್ದು ಇಂದು ಬಿವೈ ವಿಜಯೇಂದ್ರ ಭಾಗಿಯಾಗಲು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ದೆಹಲಿಯ ಹೈಕಮಾಂಡ್ ನಿಂದ ಬಲಾವ್ ಬಂದಿದೆ.
ಈ ಹಿನ್ನೆಲೆಯಲ್ಲಿ ತಕ್ಷಣ ಬಿವೈ ವಿಜಯೇಂದ್ರ ವಾಪಸ್ ಮರಳಿದ್ದಾರೆ. ಹೈಕಮಾಂಡ್ ಭೇಟಿಗಾಗಿ ಕೂಡಲೇ ದಿಢೀರ್ ಎಂದು ದೆಹಲಿಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.