ಹೊಸದಿಗಂತ ಡಿಜಿಟಲ್ ಡೆಸ್ಕ್
ಟಾಲಿವುಡ್ ನಟ ವಿಜಯ್ ದೇವರಕೊಂಡ ಅವರು ತಾಯಿ ಮಾಧವಿ ಜೊತೆ ಪ್ರಯಾಗ್ರಾಜ್ಗೆ ತೆರಳಿ ಕುಂಭಮೇಳದಲ್ಲಿ ಭಾಗಿ ಆಗಿದ್ದಾರೆ.
ಭಾನುವಾರ (ಫೆಬ್ರವರಿ 9) ಮಧ್ಯಾಹ್ನ ಪ್ರಯಾಗ್ರಾಜ್ಗೆ ತೆರಳಿ ವಿಜಯ್ ದೇವರಕೊಂಡ ಅವರು ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.
ವಿಜಯ್ ದೇವರಕೊಂಡ ಅವರು ಸಿನಿಮಾ ಕೆಲಸಗಳಿಗೆ ಬಿಡುವು ನೀಡಿ ಕುಂಭಮೇಳದಲ್ಲಿ ಪಾಲ್ಗೊಂಡಿದ್ದಾರೆ. ಕೇಸರಿ ಬಟ್ಟೆ ಹಾಗೂ ರುದ್ರಾಕ್ಷಿ ಮಾಲೆ ಧರಿಸಿ ಕಾಣಿಸಿಕೊಂಡಿದ್ದಾರೆ. ತಾಯಿ ಮಾಧವಿ ಜೊತೆ ವಿಜಯ್ ದೇವರಕೊಂಡು ಅವರು ಪ್ರಾರ್ಥನೆ ಮಾಡುತ್ತಿರುವ ಫೋಟೋ ವೈರಲ್ ಆಗುತ್ತಿದೆ.
ವೃತ್ತಿಜೀವನದಲ್ಲಿ ವಿಜಯ್ ದೇವರಕೊಂಡ ಅವರು ಸೋಲು ಮತ್ತು ಗೆಲುವು ಎರಡನ್ನೂ ಕಂಡಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅವರು ಖ್ಯಾತಿ ಗಳಿಸಿದ್ದಾರೆ. ಇನ್ನು, ವೈಯಕ್ತಿಕ ಜೀವನದ ಕಾರಣದಿಂದಲೂ ಅವರು ಸಾಕಷ್ಟು ಸುದ್ದಿ ಆಗುತ್ತಾರೆ. ನಟಿ ರಶ್ಮಿಕಾ ಮಂದಣ್ಣ ಜೊತೆ ವಿಜಯ್ ದೇವರಕೊಂಡ ಹೆಚ್ಚು ಆಪ್ತವಾಗಿದ್ದಾರೆ. ಅನೇಕ ಸಂದರ್ಭಗಳಲ್ಲಿ ಅವರಿಬ್ಬರು ಜೋಡಿಯಾಗಿ ಕಾಣಿಸಿಕೊಂಡಿದ್ದುಂಟು. ಅವರಿಬ್ಬರು ಪರಸ್ಪರರ ಸಿನಿಮಾಗಳಿಗೆ ಬೆಂಬಲವಾಗಿ ನಿಂತಿದ್ದಾರೆ.