ನಾಳೆ ಮಹಾಕುಂಭ ಮೇಳಕ್ಕೆ ರಾಷ್ಟ್ರಪತಿ ಭೇಟಿ: ತ್ರಿವೇಣಿ ಸಂಗಮದಲ್ಲಿ ದ್ರೌಪದಿ ಮುರ್ಮು ಪುಣ್ಯಸ್ನಾನ

ಹೊಸದಿಗಂತ ಡಿಜಿಟಲ್ ಡೆಸ್ಕ್

ಮಹಾಕುಂಭ ಮೇಳದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ (ಫೆ.10) ದಂದು ಭಾಗವಹಿಸಿ, ಪುಣ್ಯ ಸ್ನಾನ ಮಾಡಲಿದ್ದಾರೆ.

ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಭೇಟಿ ನೀಡಲಿದ್ದು, ಅಲ್ಲಿ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ದೃಢಪಡಿಸಿದೆ.

ಈಗಾಗಲೇ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಪ್ರಧಾನಿ ನರೇಂದ್ರ ಮೋದಿ, ಭೂತಾನ್​ ದೇಶದ ರಾಜ ಜಿಗ್ಮೆ ಕೇಸರ್ ನಾಮ್ಗ್ಯೆಲ್ ವಾಂಗ್ಚುಕ್, ಕೇಂದ್ರ ಗೃಹ ಸಚಿವ ಅಮಿತ್​ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್​​ ಸೇರಿದಂತೆ ಹಲವಾರು ಗಣ್ಯರು, ರಾಜಕಾರಣಿಗಳು, ಸಾಧು – ಸಂತರು ಎಂಬಂತೆ ಕೋಟ್ಯಾಂತರ ಜನರು ಭಾಗವಹಿಸಿ ಪುಣ್ಯ ಸ್ನಾನ ಮಾಡಿದ್ದಾರೆ.

ಪುಷ್ಯ ಪೂರ್ಣಿಮೆಯಂದು (ಜನವರಿ 13) ಪ್ರಾರಂಭವಾದ ಮಹಾಕುಂಭವು ವಿಶ್ವದ ಅತಿದೊಡ್ಡ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಭೆಯಾಗಿದ್ದು, ಪ್ರಪಂಚದಾದ್ಯಂತದ ಭಕ್ತರನ್ನು ಆಕರ್ಷಿಸುತ್ತಿದೆ. ಇದು ಫೆಬ್ರವರಿ 26 ರಂದು ಮಹಾಶಿವರಾತ್ರಿಯವರೆಗೆ ಮುಂದುವರಿಯುತ್ತದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!