ಬಿಜೆಪಿ ಶಿಸ್ತು ಸಮಿತಿಯಿಂದ ನೋಟಿಸ್: ಯತ್ನಾಳ್‌ ರಿಯಾಕ್ಷನ್ ಏನು?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಬಿಜೆಪಿ (BJP) ಶಿಸ್ತುಸಮಿತಿ ಎರಡನೇ ಬಾರಿಗೆ ಶೋಕಾಸ್ ನೋಟಿಸ್ ನೀಡಿದೆ.

ಇನ್ನು ಈ ನೋಟಿಸ್​ ಬಗ್ಗೆ ಮೊದಲ ಪ್ರತಿಕ್ರಿಯೆ ನೀಡಿರುವ ಯತ್ನಾಳ್, ನನಗೆ ಯಾವುದೇ ನೋಟಿಸ್​ ಬಂದಿಲ್ಲ. ನೋಟಿಸ್​ ಬಂದಮೇಲೆ ಕೆಲ ವ್ಯಕ್ತಿಗಳ ಸ್ವಜನಪಕ್ಷಪಾತದ ಬಗ್ಗೆ ವಿವರವಾಗಿ ಲಿಖಿತ ರೂಪದಲ್ಲಿ ಉತ್ತರ ನೀಡುತ್ತೇನೆ ಎಂದು ಖಡಕ್ ಆಗಿ ಹೇಳಿದ್ದಾರೆ.

ಶೋಕಾಸ್ ನೋಟಿಸ್​ ಸಂಬಂಧ ಟ್ವೀಟ್​ ಮೂಲಕ ಪ್ರತಿಕ್ರಿಯಿಸಿರುವ ಯತ್ನಾಳ್, ನನಗೆ ಅಧಿಕೃತವಾಗಿ ಯಾವುದೇ ನೋಟಿಸ್​​ ಬಂದಿರುವುದಿಲ್ಲ. ನೋಟಿಸ್​ ಬಂದಮೇಲೆ ಕೆಲ ವ್ಯಕ್ತಿಗಳ ಏಕಸ್ವಾಮ್ಯತೆ, ಏಕಪಕ್ಷೀಯ ನಿರ್ಧಾರಗಳು, ಉತ್ತರ ಕರ್ನಾಟಕ ಭಾಗದ ಕಡೆಗಣನೆ, ಕುಟುಂಬ ರಾಜಕಾರಣ, ಕಾಂಗ್ರೆಸ್ ವೈಫಲ್ಯಗಳನ್ನು ಜನತೆಗೆ ವಿವರಿಸಲು ವಿಫಲವಾಗಿರುವ ಪಕ್ಷದ ಧೋರಣೆ, ಹೊಂದಾಣಿಕೆ ರಾಜಕೀಯ ಸೇರಿದಂತೆ ಸ್ವಜನಪಕ್ಷಪಾತದ ಬಗ್ಗೆ ವಿವರವಾಗಿ ಲಿಖಿತ ರೂಪದಲ್ಲಿ ಉತ್ತರ ನೀಡುತ್ತೇನೆ ಎಂದು ಬರೆದುಕೊಂಡಿದ್ದಾರೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!