ಆಭರಣ ಪ್ರಿಯರಿಗೆ ಬಿಗ್ ಶಾಕ್: ಚಿನ್ನದ ದರದಲ್ಲಿ ದಿಢೀರ್ ಭಾರೀ ಏರಿಕೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಅಮೆರಿಕ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಅಧಿಕಾರ ವಹಿಸಿಕೊಂಡು ಬಳಿಕ ಟ್ರೇಡ್ ವಾರ್ ಆರಂಭಿಸಿದ್ದು, ಇದರಿಂದ ಜಾಗತಿಕ ಮಾರುಕಟ್ಟೆಗಳಲ್ಲಿ ತಲ್ಲಣ ಉಂಟಾಗಿದೆ. ಚಿನ್ನದ ದರದಲ್ಲಿ ಭಾರಿ ಏರಿಕೆಯಾಗಿದೆ.

ಫೆ.05-06 ರಂದು ಇಳಿಕೆಯಾಗಿದ್ದ ಹಳದಿ ಲೋಹದ ಬೆಲೆಯಲ್ಲಿ ದಿಢೀರ್ ಏರಿಕೆಯಾಗಿದೆ.
ಡೊನಾಲ್ಡ್ ಟ್ರಂಪ್ ಅಮೆರಿಕಾಗೆ ಆಮದಾಗುವ ಸ್ಟೀಲ್ ಹಾಗೂ ಅಲ್ಯೂಮಿನಿಯಂ ಗಳ ಮೇಲೆ ಶೇ.25 ರಷ್ಟು ಹೆಚ್ಚುವರಿ ಸುಂಕ ವಿಧಿಸುವುದಾಗಿ ಎಚ್ಚರಿಕೆ ನೀಡಿದ್ದರು. ಈ ಬೆನ್ನಲ್ಲೇ ಮಾರುಕಟ್ಟೆಯಲ್ಲಿ ತಲ್ಲಣ ಉಂಟಾಗಿದೆ. ಸದ್ಯಕ್ಕೆ ಹೂಡಿಕೆಗೆ ಚಿನ್ನವೇ ಸೇಫ್ ಎಂಬ ವಾತಾವರಣ ನಿರ್ಮಾಣವಾಗಿದ್ದು, ಚಿನ್ನದ ಬೇಡಿಕೆಯನ್ನು ಹೆಚ್ಚಿಸಿದೆ.

ಪರಿಣಾಮ ಸೋಮವಾರದ ಆರಂಭದಲ್ಲಿ ಚಿಕಾಗೋ ಮರ್ಕೆಂಟೈಲ್ ಎಕ್ಸ್‌ಚೇಂಜ್ ನಲ್ಲಿ ಪ್ರತಿ ಔನ್ಸ್ ಗೆ 2930 ಡಾಲರ್ ಗಡಿ ದಾಟಿದೆ.

ದೆಹಲಿಯಲ್ಲಿ ಚಿನ್ನದ ದರ ಪ್ರತಿ 10 ಗ್ರಾಂ ಗೆ 88,080 ರೂಪಾಯಿಗಳಿಗೆ ಏರಿಕೆಯಾಗಿದೆ. ದೇಶೀಯ ಮಾರುಕಟ್ಟೆಯಲ್ಲೂ ಚಿನ್ನಕ್ಕೆ ಬೇಡಿಕೆ ಹೆಚ್ಚಿದ್ದು, ಮುಂಬೈ ನಲ್ಲಿ 10 ಗ್ರಾಮ್ ಚಿನ್ನದ ದರ 87,300 ರೂಪಾಯಿಗಳಿಂದ 87,990 ಗಳಿಗೆ ಏರಿಕೆಯಾಗಿದೆ.

ಅಖಿಲ ಭಾರತ ರತ್ನಗಳು ಮತ್ತು ಆಭರಣ ದೇಶೀಯ ಮಂಡಳಿ (GJC)ಯ ನಿರ್ದೇಶಕ ಮತ್ತು ಅಖಿಲ ಕೇರಳ ಚಿನ್ನ ಮತ್ತು ಬೆಳ್ಳಿ ವ್ಯಾಪಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಅಬ್ದುಲ್ ನಜರ್, ಮಾತನಾಡಿ ದೇಶೀಯ ಮಾರುಕಟ್ಟೆಯಲ್ಲಿ ಹೊಸ ದಾಖಲೆಯ ಬೆಲೆ ಮಂಗಳವಾರದಿಂದ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ. ಹಳದಿ ಲೋಹವು $2931 ರಷ್ಟು ಏರಿಕೆಯಾಗಿದ್ದು, ಇದು ದಾಖಲೆಯ ಅತ್ಯಧಿಕ ಬೆಲೆಯಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!