ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಮೆರಿಕದಿಂದ ಕಾಲಿಗೆ ಚೈನ್ ಹಾಕಿಕೊಂಡು ದೇಶದ ಜನರನ್ನು ತಂದು ಬಿಸಾಕಿದ್ದು ಇಡೀ ದೇಶಕ್ಕೆ ಅವಮಾನ ಮಾಡಿದರು. ಭಾರತದಲ್ಲಿ 18 ಲಕ್ಷ ಜನ ಪಾಸ್ಪೋರ್ಟ್ ಸರೆಂಡರ್ ಮಾಡಿದ್ದಾರೆ. ಆದರೆ, ಇದರ ಬಗ್ಗೆ ಯಾವುದೇ ಚರ್ಚೆಯಾಗುತ್ತಿಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ಕಳೆದ 11 ವರ್ಷದಿಂದ ಏನನ್ನೂ ಮಾಡಿಲ್ಲ. ಲೆಕ್ಕ ಇಲ್ಲ, ಬುಕ್ ಇಲ್ಲ. ಸಾಹೇಬ್ರು ದಿನಕ್ಕೆ ಮೂರು ಬಾರಿ ಬಟ್ಟೆ ಬದಲಾಯಿಸುತ್ತಾರೆ. 16 ಗಂಟೆ ಕೆಲಸ ಮಾಡ್ತಾರೆ ಅಂತಾರೆ. ಆದರೆ, ಅವರ ಕಣ್ಣುಗಳು ಹೊಳೆಯುತ್ತಿವೆ. ಏನು ಕೆಲಸ ಮಾಡ್ತಾರೆ ಅನ್ನೋದು ಜನರಿಗೆ ಗೊತ್ತಾಗುತ್ತಿಲ್ಲ ಎಂದು ಕಳೆದ 10 ವರ್ಷದಲ್ಲಿ ದೇಶದ ಆರ್ಥಿಕತೆ ಕುಸಿದಿರುವ ಬಗ್ಗೆ ಲಾಡ್ ಆಕ್ಷೇಪ ವ್ಯಕ್ತಪಡಿಸಿದಲ್ಲದೇ ಪ್ರಧಾನಮಂತ್ರಿ ಮೋದಿಯವರ ಜೀವನಶೈಲಿ ಕುರಿತು ಕಿಡಿಕಾರಿದರು.
ಮೋದಿ ಒಂದು ಪ್ರೆಸ್ ಮೀಟ್ ನಡೆಸಲಿ: ರಾಜಕೀಯ ವಿಷಯದ ಚರ್ಚೆಗಳಿಂದ ದೂರವಿರುವುದರ ಬಗ್ಗೆ ಕಿಡಿಕಾರಿದ ಲಾಡ್, ಎಲ್ಲಾ ರಾಜ್ಯಗಳಿಗೆ ಹೋಗಿ ಮೋದಿ ಸಾಹೇಬ್ರು ಪ್ರೆಸ್ ಮೀಟ್ ಮಾಡಲಿ. ಎಂದಾದರೂ ಓಪನ್ ಡಿಸ್ಕಷನ್ ಮಾಡಿದ್ದಾರಾ? ಎಂದು ಪ್ರಶ್ನಿಸಿದರು.
11 ವರ್ಷದಲ್ಲಿ ಒಂದೇ ಒಂದು ಪತ್ರಿಕಾಗೋಷ್ಠಿ ಮಾಡಿದ್ದಾರಾ? ಕೇವಲ ಮನ್ ಕೀ ಬಾತ್ ಎನ್ನುತ್ತಾರೆ. ಕಳೆದ ಲೋಕಸಭೆ ಚುನಾವಣೆ ವೇಳೆ ಮೋದಿಯವರು ಮಂಗಳಸೂತ್ರ, ಪಾಕಿಸ್ತಾನ ಎರಡೇ ಮಾತನಾಡಿದ್ದು. 10 ವರ್ಷದಿಂದ ಬಿಜೆಪಿಯವರಿಗೆ ಮೋದಿ ಬಿಟ್ಟರೆ ಯಾವ ನಾಯಕರು ಕಾಣಲಿಲ್ಲವೇ? ಮಹಾರಾಜ ಅಲ್ಲಿಂದ ಇಳಿಯುವುದೇ ಪರಿಹಾರ ಎಂದರು.