ಬೇಸಿಗೆಗೂ ಮುನ್ನವೇ ಬೆಂಗಳೂರಿನಲ್ಲಿ ಬಿಸಿಲಿನ ತಾಪಮಾನ ಹೆಚ್ಚಳವಾಗಿದೆ. ರಾಜ್ಯದಲ್ಲಿ ಫೆ.14ರವರೆಗೆ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 13 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.