CINE | ತೆಲುಗು ಒಟಿಟಿಗೆ ಎಂಟ್ರಿ ಕೊಡಲು ರೆಡಿಯಾಗಿದೆ ಶಿವಣ್ಣನ ಸೂಪರ್ ಹಿಟ್ ಮೂವಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಶಿವರಾಜ್ ಕುಮಾರ್ ಅವರಿಗೆ ಕರ್ನಾಟಕದಲ್ಲಿ ಮಾತ್ರವೇ ಅಲ್ಲದೆ ದಕ್ಷಿಣ ಭಾರತದ ಇತರೆ ರಾಜ್ಯಗಳಲ್ಲಿಯೂ ಅಭಿಮಾನಿ ಬಳಗ ಇದೆ. ತಮಿಳು, ತೆಲುಗಿನ ಸಿನಿಮಾಗಳಲ್ಲಿಯೂ ಶಿವಣ್ಣ ನಟಿಸಿದ್ದು, ಅಲ್ಲಿನ ಪ್ರೇಕ್ಷಕರು ಶಿವಣ್ಣನಿಗೆ ಗೌರವ ನೀಡುತ್ತಾರೆ.

‘ಜೈಲರ್’ ಸಿನಿಮಾ ಬಿಡುಗಡೆ ಬಳಿಕವಂತೂ ಶಿವರಾಜ್ ಕುಮಾರ್ ಅವರಿಗೆ ಪರಭಾಷೆ ಅಭಿಮಾನಿಗಳ ಸಂಖ್ಯೆ ದುಪ್ಪಟ್ಟಾಗಿದ್ದು, ಇದೀಗ ಶಿವಣ್ಣನ ಸಿನಿಮಾಗಳಿಗೆ ಪರಭಾಷೆಗಳಲ್ಲಿ ಬೇಡಿಕೆ ಹೆಚ್ಚಾಗಿದೆ.

ಶಿವರಾಜ್ ಕುಮಾರ್ ನಟಿಸಿರುವ ಹಿಟ್ ಸಿನಿಮಾ ಒಂದು ಇದೀಗ ತೆಲುಗು ಒಟಿಟಿಯೊಂದರಲ್ಲಿ ಅದ್ಧೂರಿಯಾಗಿ ಬಿಡುಗಡೆ ಆಗುತ್ತಿದೆ. ತೆಲುಗಿನ ‘ಆಹಾ’ ಒಟಿಟಿಯಲ್ಲಿ ಶಿವರಾಜ್ ಕುಮಾರ್ ನಟಿಸಿರುವ ‘ಭೈರತಿ ರಣಗಲ್’ ಸಿನಿಮಾ ಬಿಡುಗಡೆ ಆಗುತ್ತಿದೆ. ‘ಭೈರತಿ ರಣಗಲ್’ ಸಿನಿಮಾ ಕಳೆದ ವರ್ಷ ನವೆಂಬರ್ ತಿಂಗಳಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ರುಕ್ಮಿಣಿ ವಸಂತ್, ರಾಹುಲ್ ಭೋಸ್, ಛಾಯಾ ಸಿಂಗ್ ಸೇರಿದಂತೆ ಇನ್ನೂ ಹಲವರು ನಟಿಸಿರುವ ಈ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿ ಉತ್ತಮ ಪ್ರದರ್ಶನ ಕಂಡಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!