ಹೊಸದಿಗಂತ ಡಿಜಿಟಲ್ ಡೆಸ್ಕ್:
2022ರಲ್ಲಿ ನಡೆದಿದ್ದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯನ್ನು ಅವಹೇಳನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಲಕ್ನೋ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಮಾರ್ಚ್ 24 ರಂದು ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಅವರಿಗೆ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಅಲೋಕ್ ವರ್ಮಾ ನಿರ್ದೇಶನ ನೀಡಿದ್ದಾರೆ.