ಪ್ರಧಾನಿ ಮೋದಿ ಫ್ರಾನ್ಸ್ ಭೇಟಿ ಮುಕ್ತಾಯ: ಆತ್ಮೀಯವಾಗಿ ಬೀಳ್ಕೊಟ್ಟ ಅಧ್ಯಕ್ಷ ಮ್ಯಾಕ್ರನ್!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಮೂರು ದಿನಗಳ ಐತಿಹಾಸಿಕ ಫ್ರಾನ್ಸ್ ಭೇಟಿಯನ್ನು ಮುಕ್ತಾಯಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ಇಂದು ಅಮೆರಿಕದತ್ತ ಪ್ರಯಾಣ ಬೆಳೆಸಿದ್ದಾರೆ.

Image

ಮೋದಿಯವರೊಂದಿಗಿನ ಆತ್ಮೀಯ ಸಂಬಂಧದ ಸೂಚಕವಾಗಿ ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಭಾರತದ ಪ್ರಧಾನಿ ಮೋದಿ ಅವರಿಗೆ ವಿಮಾನ ನಿಲ್ದಾಣದಲ್ಲಿ ಬೀಳ್ಕೊಡುಗೆ ನೀಡಿದ್ದಾರೆ. ಈ ವೇಳೆ ಇಬ್ಬರೂ ನಾಯಕರು ಆತ್ಮೀಯ ಅಪ್ಪುಗೆಯನ್ನು ವಿನಿಮಯ ಮಾಡಿಕೊಂಡರು.

Imageಪ್ರಧಾನಿ ಮೋದಿ ಇಂದು ಫ್ರಾನ್ಸ್​ನ ಮಾರ್ಷಿಲ್ಲೆಯಿಂದ ವಾಷಿಂಗ್ಟನ್‌ಗೆ ವಿಮಾನದ ಮೂಲಕ ತೆರಳಿದ್ದಾರೆ. ಈ ವೇಳೆ ಅವರನ್ನು ಬೀಳ್ಕೊಡಲು ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಮಾರ್ಷಿಲ್ಲೆ ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ. ಇದು ಎರಡೂ ರಾಷ್ಟ್ರಗಳ ನಡುವಿನ ಬಲವಾದ ದ್ವಿಪಕ್ಷೀಯ ಸಂಬಂಧಗಳನ್ನು ಒತ್ತಿಹೇಳಿತು.

Image

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!