ಹೊಸದಿಗಂತ ಡಿಜಿಟಲ್ ಡೆಸ್ಕ್:
ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಅಮೆರಿಕಕ್ಕೆ ಆಗಮಿಸಿದ್ದಾರೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಆಹ್ವಾನದ ಮೇರೆಗೆ ಅಮೆರಿಕಕ್ಕೆ ಭೇಟಿ ನೀಡಿದ್ದಾರೆ.
ಯುಎಸ್ನಲ್ಲಿರುವ ಭಾರತದ ರಾಯಭಾರಿ ವಿನಯ್ ಮೋಹನ್ ಕ್ವಾತ್ರಾ ಮತ್ತು ಇತರ ಅಧಿಕಾರಿಗಳು ಪ್ರಧಾನಿ ಮೋದಿ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು.
ಡೊನಾಲ್ಡ್ ಟ್ರಂಪ್ ಎರಡನೇ ಅವಧಿಗೆ ಅಧಿಕಾರ ವಹಿಸಿಕೊಂಡ ನಂತರ ಪ್ರಧಾನಿ ಮೋದಿ ಅವರ ಮೊದಲ ಯುನೈಟೆಡ್ ಸ್ಟೇಟ್ಸ್ ಭೇಟಿ ಇದಾಗಿದೆ. ತಮ್ಮ ಪ್ರವಾಸದ ವೇಳೆ ಪ್ರಧಾನಿ ಮೋದಿ ಅವರು ಅಮೆರಿಕ ಅಧ್ಯಕ್ಷ ಟ್ರಂಪ್ ಅವರನ್ನು ಭೇಟಿ ಮಾಡಲಿದ್ದಾರೆ.
ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಲು ಭಾರತೀಯ ಸಮುದಾಯದ ಸದಸ್ಯರು ಬ್ಲೇರ್ ಹೌಸ್ ಹೊರಗೆ ಜಮಾಯಿಸಿದ್ದಾರೆ. ಪ್ರಧಾನಿ ಮೋದಿಯವರಿಗೆ ಅಮೇರಿಕಾ ಅತ್ಯುನ್ನತ ಆದ್ಯತೆ ನೀಡಿದ್ದಕ್ಕೆ ಭಾರತೀಯ ಸಮುದಾಯದ ಸದಸ್ಯರು ಉತ್ಸುಕರಾಗಿದ್ದಾರೆ ಎಂದು ಭಾರತೀಯ ವಲಸಿಗರ ಸದಸ್ಯ ಶ್ರೀನಿವಾಸ್ ಹೇಳಿದ್ದಾರೆ.