ಹೊಸದಿಗಂತ ವರದಿ, ಪಾಂಡವಪುರ:
ಜಮೀನಿನಲ್ಲಿ ಬೆಳೆಗೆ ನೀರು ಹಾಯಿಸುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ತಗುಲಿ ರೈತನೋರ್ವ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ತಾಲೂಕಿನ ಹಿರೇಮರಳಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಹಿರೇಮರಳಿ ಗ್ರಾಮದ ಲೇಟ್. ಹೊನ್ನೇಗೌಡರ ಪುತ್ರ ಹೊನ್ನೇಗೌಡ(47) ಸಾವನ್ನಪ್ಪಿರುವ ರೈತ.
ಗ್ರಾಮದ ಹೊರವಲಯದಲ್ಲಿರುವ ತಮ್ಮ ಜಮೀನ ಎಲೆತೋಟಕ್ಕೆ ನೀರು ಹಾಯಿಸುತ್ತಿದ್ದ ಸಂದರ್ಭದಲ್ಲಿ ವಿದ್ಯುತ್ ತಂತಿ ಸ್ಕಿನ್ ಆಗಿ ವಿದ್ಯುತ್ ಸ್ಪರ್ಶವಾಗಿ ರೈತ ಹೊನ್ನೇಗೌಡ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅಕ್ಕಪಕ್ಕದ ಜಮೀನಿನವರು ಪೊಲೀಸಿರಿಗೆ ವಿಷಯ ಮುಟ್ಟಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹವನ್ನು ಪಾಂಡವಪುರ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನಿಸಿ ಶವಪರೀಕ್ಷೆ ನಡೆಸಿ ವಾರಸ್ಸುದಾರರಿಗೆ ಒಪ್ಪಿಸಿದರು. ಮೃತರಿಗೆ ಪತ್ನಿ ಗೀತಾ, ಒಂದು ಹೆಣ್ಣ, ಗಂಡು ಮಗುವಿದೆ. ಘಟನೆ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.