BMTC ಬಸ್-ಬೈಕ್ ನಡುವೆ ಭೀಕರ ಅಪಘಾತ: ಅವಘಡದಲ್ಲಿ ಮೂವರ ಸ್ಥಿತಿ ಗಂಭೀರ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೆ.ಆರ್.ಮಾರುಕಟ್ಟೆ, ಬಳಿ ಬಿಎಂಟಿಸಿ ಬಸ್ ಹಾಗೂ ಬೈಕ್ ಗಳ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಬಸ್ ಗೆ ಬೈಕ್ ವೊಂದು ಡಿಕ್ಕಿಹೊಡೆದು ಬಸ್‌ ಕೆಳಗೆ ಸಿಲುಕಿದೆ. ಇದೇ ವೇಳೆ ಬಂದ ಮತ್ತೊಂದು ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ.

ಬೈಕ್ ನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!