ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಜನತೆಗೆ ಮತ್ತೊಂದು ಶಾಕ್ ಎದುರಾಗಿದ್ದು, ವಿದ್ಯುತ್ ದರ ಏರಿಕೆಗೆ ಬೆಸ್ಕಾಂ ಸಿದ್ಧತೆ ನಡೆಸಿದೆ ಎನ್ನಲಾಗಿದೆ. ಬರುವ 3 ವರ್ಷಗಳಿಗೆ ಅನ್ವಯವಾಗುವಂತೆ ವಿದ್ಯುತ್ ದರ ಏರಿಕೆಗೆ ಬೆಸ್ಕಾಂ ಸಿದ್ಧತೆ ನಡೆಸಿದೆ.
ಫೆ.17 ರಂದು ಸಾರ್ವಜನಿಕರ ಆಕ್ಷೇಪಣೆಗೆ ಆಹ್ವಾನ ನೀಡಲಾಗಿದ್ದು, ಸಭೆ ನಡೆಸಿ ವಿದ್ಯುತ್ ದರ ಏರಿಕೆ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ತಿಳಿದು ಬಂದಿದೆ.