ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾಲಿನ ಬೆಲೆ ಏರಿಕೆ ನಂತರ ರಾಜ್ಯದಲ್ಲಿ ಅನೇಕ ಹೋಟೆಲ್ಗಳು ಕಾಫಿ ಹಾಗೂ ಚಹಾ ದರ ಏರಿಕೆ ಮಾಡಿವೆ. ಇದೀಗ ಕಾಫಿ ಪುಡಿಯ ದರಗಳು ಕೂಡ ಹೆಚ್ಚಾಗುತ್ತಿದ್ದು, ಪರಿಣಾಮವಾಗಿ ಒಂದು ಕಪ್ ಕಾಫಿ ಬೆಲೆ ಐದು ರೂಪಾಯಿ ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ರೋಸ್ಟರ್‌ಗಳು ಮಾರಾಟ ಮಾಡುವ ಹುರಿದ ಕಾಫಿ ಪುಡಿಯ ಬೆಲೆ ಫೆಬ್ರವರಿ ಅಂತ್ಯದ ವೇಳೆಗೆ ಪ್ರತಿ ಕೆಜಿಗೆ 100 ರೂ.ಗಳಷ್ಟು ಹೆಚ್ಚಾಗುತ್ತದೆ ಮತ್ತು ಮಾರ್ಚ್ ಅಂತ್ಯದ ವೇಳೆಗೆ ಮತ್ತೆ ಕೆಜಿಗೆ 100 ರೂ.ಗಳಷ್ಟು ಹೆಚ್ಚಾಗುತ್ತದೆ ಎಂದು ತಿಳಿದುಬಂದಿದೆ.
ಅಂತರರಾಷ್ಟ್ರೀಯ ಕಾಫಿ ಮಾರುಕಟ್ಟೆಯಲ್ಲಿನ ಏರಿಳಿತಗಳಿಂದಾಗಿ ಬೆಲೆ ಏರಿಕೆ ಅನಿವಾರ್ಯ ಎಂದು ಕಾಫಿ ಮಂಡಳಿಯ ಮೂಲಗಳು ತಿಳಿಸಿವೆ.