ಹೊಸದಿಗಂತ ಡಿಜಿಟಲ್ ಡೆಸ್ಕ್;
ಚಿಕ್ಕಮಗಳೂರು ಜಿಲ್ಲೆಯ ಗೌರಿಗದ್ಧೆ ಮಠದಲ್ಲಿ ಬೆಂಕಿ ಅವಘಡ ಉಂಟಾಗಿದೆ. ಆಕಸ್ಮಿಕ ಬೆಂಕಿ ಅವಘಟದಿಂದಾಗಿ ಗೋವುಗಳಿಗೆ ಸಂಗ್ರಹಿಸಿದ್ದ ಮೇವು ಧಗಧಗಿಸಿ ಹೊತ್ತಿ ಉರಿಯುತ್ತಿದೆ.
ಗೋ ಶಾಲೆಗೂ ಬೆಂಕಿ ತಗುಲಿದ್ದು, ಗೋವುಗಳನ್ನು ರಕ್ಷಿಸಲಾಗಿದೆ.
ಇನ್ನೂ ಸ್ಥಳಕ್ಕೆ ಆಗಮಿಸಿರುವಂತ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಬೆಂಕಿಯ ಕೆನ್ನಾಲಿಗೆಯಿಂದ ಸುಮಾರು 12 ಲಕ್ಷ ಮೌಲ್ಯದ ಮೇವು ಸುಟ್ಟು ಭಸ್ಮವಾಗಿದೆ.
ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.