ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಕರೂರು ಗ್ರಾಮದಲ್ಲಿ ಆಕಸ್ಮಿಕವಾಗಿ ದನದ ಕೊಟ್ಟಿಗೆಗೆ ಬೆಂಕಿಬಿದ್ದು 6 ಹಸುಗಳು ಹಾಗೂ 2 ಕರುಗಳು ಸಜೀವ ದಹನವಾಗಿರುವ ಘಟನೆ ನಡೆದಿದೆ.
ಗ್ರಾಮದ ರೈತ ನಾಗಪ್ಪ ಅಸುಂಡಿ, ಹನುಮಂತಪ್ಪ ಅಸುಂಡಿ ಎಂಬುವರಿಗೆ ಸೇರಿದ ದನದ ಕೊಟ್ಟಿಗೆಯಲ್ಲಿ ಈ ಘಟನೆ ನಡೆದಿದೆ.
ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿಬಿದ್ದು ೬ ಹಸು, ೨ ಕರುಗಳು ಸ್ಥಳದಲ್ಲಿಯೇ ಸಜೀವ ದಹನಗೊಂಡಿವೆ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಸ್ಥಳಕ್ಕೆ ರಟ್ಟಿಹಳ್ಳಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.