ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೊಳ್ಳೇಗಾಲದ ದಾಸನಪುರ ಬಳಿಯ ಕಾವೇರಿ ನದಿಯಲ್ಲಿ ಯೋಗ ಮಾಡುತ್ತಲೇ ಯೋಗಪಟು ಮೃತಪಟ್ಟಿರುವ ಘಟನೆ ನಡೆದಿದೆ.
ಕೊಳ್ಳೇಗಾಲದ ಯೋಗಪಟು ನಾಗರಾಜ್ (78) ಮೃತ ದುರ್ದೈವಿ. ತೀರ್ಥ ಸ್ನಾನ ಮಾಡಲೆಂದು ನಾಗರಾಜ್ ಕಾವೇರಿ ನದಿಗೆ ಇಳಿದಿದ್ದರು. ನಾಗರಾಜ್ ನದಿ ನೀರಿನಲ್ಲಿ ತೇಲುತ್ತಾ ಯೋಗ ಮಾಡುತ್ತಿದ್ದರು. ಎಷ್ಟು ಹೊತ್ತಾದರೂ ನಾಗರಾಜು ತೇಲುವ ಸ್ಥಿತಿಯಲ್ಲೇ ಇದ್ದರು. ಅನುಮಾನಗೊಂಡು ಹತ್ತಿರ ಹೋಗಿ ನೋಡಿದಾಗ ನಾಗರಾಜ್ ಮೃತಪಟ್ಟಿದ್ದರು. ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.