ಹೊಸದಿಗಂತ ಡಿಜಿಟಲ್ ಡೆಸ್ಕ್:
ನೀರಾವರಿ ವಿಚಾರದಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ವಿರುದ್ಧ ಪಕ್ಷಾತೀತವಾಗಿ ಹೋರಾಡಲು ಸಿದ್ಧ ಎಂಬ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಹೇಳಿಕೆಯನ್ನು ನಾನು ಸಂಪೂರ್ಣ ಸ್ವಾಗತಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನೆಲ-ಜಲ-ಭಾಷೆ ವಿಚಾರದಲ್ಲಿ ನಾನು ಸದಾ ಕನ್ನಡಿಗನಾಗಿ ನಡೆದುಕೊಂಡಿದ್ದೇನೆಯೇ ಹೊರತು ರಾಜಕಾರಣಿಯಾಗಿ ಅಲ್ಲ ಎನ್ನುವುದನ್ನು ಹಿರಿಯರಾದ ದೇವೇಗೌಡರ ಗಮನಕ್ಕೆ ತರಬಯಸುತ್ತೇನೆ. ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬೇಕೆಂದು 2016ರ ಸೆಪ್ಟೆಂಬರ್ ತಿಂಗಳಲ್ಲಿ ಸುಪ್ರೀಂ ಕೋರ್ಟ್ ಆದೇಶ ನೀಡಿದಾಗ ಉದ್ಭವವಾದ ಬಿಕ್ಕಟ್ಟಿನ ಸಂದರ್ಭದಲ್ಲಿ ಸಿಎಂ ನಾನು ನಿಮ್ಮ ಮನೆಗೆ ಬಂದು ಕೈಹಿಡಿದು ಕರೆದುಕೊಂಡು ಬಂದು ಸರ್ವಪಕ್ಷಗಳ ಸಭೆ ನಡೆಸಿದ್ದು ನಿಮಗೆ ನೆನಪಿರಬಹುದೆಂದು ಭಾವಿಸಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ.