ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಬೆನ್ನಲ್ಲೇ ಬಿಹಾರದಲ್ಲೂ ಪ್ರಬಲ ಭೂಕಂಪ ಸಂಭವಿಸಿದ್ದು, ಇಂದು ಬೆಳಿಗ್ಗೆ 08.02 ಕ್ಕೆ ಬಿಹಾರದಲ್ಲಿ 4.0 ತೀವ್ರತೆಯ ಭೂಕಂಪ ಸಂಭವಿಸಿದೆ. ರಾಷ್ಟ್ರೀಯ ಭೂಕಂಪಶಾಸ್ತ್ರ, ಕೇಂದ್ರದ ಪ್ರಕಾರ, ರಾಜ್ಯದ ಸಿವಾನ್ನಲ್ಲಿ ಭೂಕಂಪನದ ಅನುಭವವಾಗಿದೆ.
ಭೂಕಂಪದ ಕೇಂದ್ರ ಬಿಂದು 10ಕಿ.ಮೀ ಆಳದಲ್ಲಿತ್ತು ಎಂದು ಅದು ಹೇಳಿದೆ. ಭೂಕಂಪದಿಂದಾಗಿ ಯಾವುದೇ ಹಾನಿ ಅಥವಾ ಗಾಯಗಳ ಬಗ್ಗೆ ವರದಿಗಳಿಲ್ಲ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.