ಹೊಸದಿಗಂತ ಡಿಜಿಟಲ್ ಡೆಸ್ಕ್:
ಅಂಗನವಾಡಿಯಲ್ಲಿ ಆಟವಾಡುತ್ತಿದ್ದ ಬಾಲಕಿ ದಿಡೀರನೆ ಬಿದ್ದು ಮೃತಪಟ್ಟ ಘಟನೆ ಕುಷ್ಟಗಿ ತಾಲೂಕಿನ ಬಳೂಟಗಿ ಗ್ರಾಮದಲ್ಲಿ ನಡೆದಿದೆ.
ಅಲಿಯಾ ಮಹ್ಮದ್ ರಿಯಾಜ್ (5) ಮೃತ ಬಾಲಕಿ. ನಿನ್ನೆ ಮಧ್ಯಾಹ್ನ ಆಟವಾಡುತ್ತಿದ್ದಾಗ ದಿಢೀರನೆ ಕುಸಿದು ಬಿದ್ದಿದ್ದ ಬಾಲಕಿಯನ್ನು ನೋಡಿ ಅಂಗನವಾಡಿ ಸಹಾಯಕಿ ಓಡಿ ಬಂದಿದ್ದಾರೆ. ಕೂಡಲೇ ಪಾಲಕರಿಗೆ ಮಾಹಿತಿ ನೀಡಲಾಗಿದೆ. ಕೂಡಲೆ ಬಾಲಕಿಯನ್ನು ಸಮೀಪದ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಲಾಗಿದೆ. ಆದರೆ, ಆಸ್ಪತ್ರೆಗೆ ಹೋಗುವ ಮುನ್ನವೇ ಬಾಲಕಿ ಮೃತಪಟ್ಟಿದ್ದಾರೆ.
ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಮಗು ಮೃತಪಟ್ಟಿದೆ ಅಂತ ವೈದ್ಯರು ಮಾಹಿತಿ ನೀಡಿದ್ದಾರೆ. ದಿಢೀರನೆ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟುವುದರಿಂದ ಕೆಲವರಿಗೆ ಈ ರೀತಿಯಾಗುತ್ತದೆ. ಬಾಲಕಿ ಸಾವಿಗೆ ಇದೇ ಕಾರಣ ಅಂತ ಪೋಷಕರಿಗೆ ತಿಳಿಸಿದ್ದಾರೆ. ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.